Breaking News

CM’ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ RTI ಕಾರ್ಯಕರ್ತ `ಸ್ನೇಹಮಯಿ ಕೃಷ್ಣ’ ಗಡಿಪಾರಿಗೆ ಮನವಿ!

Spread the love

ಮೈಸೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿದ್ದ ಆರ್.ಟಿ.ಐ. ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಮೈಸೂರು ಪೊಲೀಸ್ ಆಯುಕ್ತರಿಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ದೂರು ನೀಡಿದ್ದಾರೆ.

BIG NEWS : `CM' ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ RTI ಕಾರ್ಯಕರ್ತ `ಸ್ನೇಹಮಯಿ ಕೃಷ್ಣ' ಗಡಿಪಾರಿಗೆ ಮನವಿ!

ಸ್ನೇಹಮಯಿ ಕೃಷ್ಣ ಅವರನ್ನು ಗಡಿಪಾರು ಮಾಡಬೇಕು. ಸ್ನೇಹಮಯಿ ಕೃಷ್ಣ ವಿರುದ್ಧ 17 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ರಾಜ್ಯದ ಹಲವೆಡೆ ಅವರ ವಿರುದ್ಧ ಪ್ರಕರಣ ದಾಖಲಾಗಿವೆ. ಆಸ್ತಿ ವಿಚಾರದಲ್ಲಿ ಹಸ್ತಕ್ಷೇಪ ಮಾಡಿ ಭೂಮಿ ವಶಪಡಿಸಿಕೊಳ್ಳುವುದು, ನನ್ನನ್ನು ಸೇರಿದಂತೆ ನಗರದ ಗಣ್ಯರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಿ ಎಂದು ಮೈಸೂರು ಪೊಲೀಸ್ ಕಮಿಷನರ್ ಗೆ ಎಂ. ಲಕ್ಷ್ಮಣ ಮನವಿ ಮಾಡಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಬರೆದ ಪತ್ರದಿಂದಲೇ ಸತ್ಯಾಂಶ ಗೊತ್ತಾಗುತ್ತಿದೆ. ಎಂದು ಗಂಭೀರ ಆರೋಪ ಮಾಡಿದ್ದರು.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ