Breaking News

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್

Spread the love

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂಡೂಡಿದೆ.

ರಾಜ್ಯಪಾಲರ ನಡೆ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯಪೀಠ, ಉಭಯ ವಕೀಲರ ಸುದೀರ್ಘ ವಾದ-ಪ್ರತಿವಾದವನ್ನು ಆಲಿಸಿತು.

 

ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಹಾಗೂ ರವಿವರ್ಮ ಕುಮಾರ್ ವಾದ ಮಂಡಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪರ ತುಷಾರ್ ಮೆಹ್ತಾ ವಾದ ಮಂಡನೆ ಮಾಡಿದರು. ದೂರುದಾರರ ಪರ ವಕೀಲರು ಕೂಡ ವಾಡ ಮಂಡನೆ ಮಾಡಿದ್ದಾರೆ. ಸುದೀರ್ಘ ವಾದಮಂಡನೆ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ಅರ್ಜಿ ವಿಚಾರಣೆಯನ್ನು ಸೆ.2 ಮಧ್ಯಾಹ್ನ 2:30ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ