ಬೆಂಗಳೂರು: ಮುಖ್ಯಮಂತ್ರಿ ರಾಜೀನಾಮೆ ಕೊಡುವ ಅಗತ್ಯವೇ ಇಲ್ಲ. ಹಾಗಾಗಿ ‘ಅಕಸ್ಮಾತ್ ಬದಲಾವಣೆ’ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ನಾವು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿರುವಾಗ ‘ಅಕಸ್ಮಾತ್’ ಪ್ರಶ್ನೆ ಬರುವುದಿಲ್ಲ.
ಹೀಗಾಗಿ ಸಿಎಂ ಬದಲಾವಣೆ, ಮುಂದಿನ ಸಿಎಂ ಚರ್ಚೆಯೇ ಇಲ್ಲ. ಊಹಾಪೋಹಕ್ಕೂ ಅವಕಾಶವಿಲ್ಲ ಎಂದು ಅವರು ತಿಳಿಸಿದರು. ಎಂದು ಸ್ಪಷ್ಟಪಡಿಸಿದರು.
Laxmi News 24×7