Breaking News

ಎಚ್.ಐ.ವಿ, ಏಡ್ಸ್ ಪೀಡಿತರಿಗೆ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು: ಜಿಲ್ಲಾಧಿಕಾರಿ ಹಿರೇಮಠ

Spread the love

ಬೆಳಗಾವಿ: ಎಚ್.ಐ.ವಿ, ಏಡ್ಸ್ ಪೀಡಿತರಿಗೆ ರೇಷನ್ ಕಾರ್ಡ್, ವೈದ್ಯಕೀಯ ಸೌಲಭ್ಯ, ಶಾಲಾ ಪ್ರವೇಶ, ವಿದ್ಯಾರ್ಥಿ ವೇತನ, ವಸತಿ ಯೋಜನೆಯಡಿ ವಸತಿ ಸೇರಿದಂತೆ ಸರ್ಕಾರದಿಂದ ನೀಡಲಾಗುತ್ತಿರುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಎಚ್.ಐ.ವಿ., ಏಡ್ಸ್ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಚ್.ಐ.ವಿ. ಸೋಂಕಿತರಿಗೆ ಖಾಸಗಿ ಆಸ್ಪತ್ರೆಯವರು ಚಿಕಿತ್ಸೆ ನಿರಾಕರಿಸಿದರೆ ಲೈಸೆನ್ಸ್ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಶಾಲೆಗಳಲ್ಲಿ ಮಕ್ಕಳಿಗೆ ತಾರತಮ್ಯ ಆಗದಂತೆ ಎಚ್ಚರಿಕೆ ವಹಿಸಬೇಕು. ಎಲ್ಲಿಯೇ ತಾರತಮ್ಯ ಅಥವಾ ಕಿರುಕುಳ ಕಂಡುಬಂದರೆ ಪೆÇಲೀಸ್ ಪ್ರಕರಣವನ್ನು ದಾಖಲಿಸಬೇಕು. ಇಂತಹ ಪ್ರಕರಣದಲ್ಲಿ ಸೋಂಕಿತರ ಬಗ್ಗೆ ಸಹಾನುಭೂತಿಯಿಂದ ನಡೆದುಕೊಳ್ಳಬೇಕು ಎಂದು ಪೆÇಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಆರೋಗ್ಯ ಇಲಾಖೆ ಸೇರಿದಂತೆ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೆÇಲೀಸ್, ಕಾರ್ಮಿಕ ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆಯವರು ತಮ್ಮ ವ್ಯಾಪ್ತಿಯಲ್ಲಿ ಬರುವ ನೆರವು ನೀಡಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ಸೂಚನೆ ನೀಡಿದರು.

ಸೋಂಕಿತರಿಗೆ ಏಕಗವಾಕ್ಷಿ ವ್ಯವಸ್ಥೆಯಡಿ ನೀಡಲಾಗುವ ಸಹಾಯ-ಸೌಲಭ್ಯಗಳಿಗೆ ಸಂಬಂಧಿಸಿದಂತೆ ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಸುತ್ತೋಲೆ ಮತ್ತು ಆದೇಶ ಪ್ರತಿಗಳನ್ನು ಎಲ್ಲರಿಗೂ ಒದಗಿಸಬೇಕು ಎಂದು ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ.ಎಚ್. ಸಲಹೆ ನೀಡಿದರು.

ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೆÇಲೀಸ್ ಆಯುಕ್ತರಾದ ಚಂದ್ರಶೇಖರ್ ನೀಲಗಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಸವರಾಜ ತುಕ್ಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಕಾರ್ಮಿಕ ಅಧಿಕಾರಿ ತರನ್ನುಂ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ