ಬೆಂಗಳೂರು, ನ.26- ಮರಾಠ ಅಭಿವೃದ್ಧಿ ನಿಗಮ ರಚನೆ ರಾಜಕೀಯ ಪ್ರೇರಿತ, ಸರ್ಕಾರದ ದುಡುಕಿನ ನಿರ್ಧಾರ ಹಾಗೂ ಅಸಾಂವಿಧಾನಿಕ ತೀರ್ಮಾನವಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಇದನ್ನು ತೀವ್ರವಾಗಿ ವಿರೋಸುತ್ತದೆ ಎಂದು ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.
ಮರಾಠ ಅಭಿವೃದ್ಧಿ ನಿಗಮ ವಿರೋಸಿ ಕರ್ನಾಟಕ ಬಂದ್‍ಗೆ ಕನ್ನಡ ಒಕ್ಕೂಟ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ರಕ್ಷಣಾ ವೇದಿಕೆ ರಾಜ್ಯ ಪದಾಕಾರಿಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಬಂದ್‍ಗೆ ಬೆಂಬಲ ನೀಡುವುದಾಗಿ ಘೋಷಿಸಿದರು.
ರಾಜ್ಯ ಸರ್ಕಾರ ಇಂತಹ ಸೂಕ್ಷ್ಮ ನಿರ್ಧಾರ ಕೈಗೊಳ್ಳುವ ಮುನ್ನ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರ ಸಭೆ ಕರೆದು ಸೌಹಾರ್ದಯುತವಾಗಿ ಬಗೆಹರಿಸಬಹುದಿತ್ತು. ಆದರೆ, ಮುಖ್ಯಮಂತ್ರಿಗಳಾದಿಯಾಗಿ ಹಲವು ಶಾಸಕರು, ಬಿಜೆಪಿ ಮುಖಂಡರು ಪ್ರಚೋದನಾಕಾರಿ ಹೇಳಿಕೆ ನೀಡಿ ಕನ್ನಡಿಗರನ್ನು ಭಾವನಾತ್ಮಕವಾಗಿ ಕೆರಳಿಸಿ ರಾಜಕೀಯ ಲಾಭ ಪಡೆಯಲು ಹವಣಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Laxmi News 24×7