1-10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇಂದಿನಿಂದಲೇ ವಾರದ 6 ದಿನವೂ ಮಕ್ಕಳಿಗೆ ಮೊಟ್ಟೆ ವಿತರಣೆ!
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಎನ್ನುವಂತೆ ಇಂದಿನಿಂದಲೇ ವಾರದಲ್ಲಿ 6 ದಿನವೂ ಮೊಟ್ಟೆ ವಿತರಣೆ ಮಾಡುವ ನಿರೀಕ್ಷೆಯಿದೆ.
ಸೆಪ್ಟೆಂಬರ್ ತಿಂಗಳಿನಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದ 6 ದಿನವೂ ಮೊಟ್ಟೆ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಣೆಗೆ ರಜಾ ದಿನ ಹೊರತುಪಡಿಸಿ, ಪ್ರಸ್ತುತ ಮಕ್ಕಳಿಗೆ ವಾರಕ್ಕೆ 2 ದಿನ ಮೊಟ್ಟೆ ನೀಡಲಾಗುತ್ತಿದೆ.ವಾರದ 6 ದಿನವೂ ಮೊಟ್ಟೆ ವಿತರಣೆಗೆ ನಿರ್ಧರಿಸಲಾಗಿದೆ. ಇಂದಿನಿಂದ 6 ದಿನ ಮೊಟ್ಟೆ ವಿತರಣೆ ಮಾಡುವ ಸಾಧ್ಯತೆ ಇದೆ. ವಾರದ 6 ದಿನವೂ ಮಕ್ಕಳಿಗೆ ಮೊಟ್ಟೆ ನೀಡುವುದರಿಂದ ವಾರ್ಷಿಕ 1,400 ಕೋಟಿ ರು. ವೆಚ್ಚವಾಗಲಿದೆ.