Breaking News

ಬಿಜೆಪಿ ಸದಸ್ಯನ ಅ‍ಪಹರಣ: ಕಿತ್ತೂರು ಪ.ಪಂ ಚುನಾವಣೆಗೆ ಹೈಕೋರ್ಟ್‌ ತಡೆ

Spread the love

 ಕಿತ್ತೂರು (ಬೆಳಗಾವಿ ಜಿಲ್ಲೆ): ಪಟ್ಟಣ ಪಂಚಾಯಿತಿ ಸದಸ್ಯ ನಾಗರಾಜ ಅಸುಂಡಿ ಅವರನ್ನು ಅ‍ಪಹರಣ ಮಾಡಿದ ಹಿನ್ನೆಲೆಯಲ್ಲಿ, ಸೆ.3ರಂದು ನಡೆಯಬೇಕಿದ್ದ ಪಟ್ಟಣ ಪಂಚಾಯಿತಿ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಗೆ ಹೈಕೋರ್ಟ್‌ನ ಧಾರವಾಡ ಪೀಠ ತಡೆ ನೀಡಿದೆ.

ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿಯ 9 ಸದಸ್ಯರಿದ್ದಾರೆ.

ಐವರು ಕಾಂಗ್ರೆಸ್‌ ಹಾಗೂ ನಾಲ್ವರು ಪಕ್ಷೇತರರು ಸೇರಿ ಕಾಂಗ್ರೆಸ್‌ ಬಲವೂ 9ಕ್ಕೆ ಏರಿದೆ. ಬಿಜೆಪಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಕಾಂಗ್ರೆಸ್‌ಗೆ ಶಾಸಕ ಬಾಬಾಸಾಹೇಬ ಪಾಟೀಲ ಅವರ ಮತಗಳೂ ಇವೆ. ಹೀಗಾಗಿ, ಎರಡೂ ಪಕ್ಷಗಳಲ್ಲಿ ತಲಾ 10 ಮತಗಳಿವೆ.

‘ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಒಬ್ಬ ಬಿಜೆಪಿ ಸದಸ್ಯರನ್ನು ಅಪಹರಣ ಮಾಡಿದರೆ ಗೆಲ್ಲಬಹುದು ಎಂಬ ಉದ್ದೇಶದಿಂದ ಕಾಂಗ್ರೆಸ್‌ ಈ ಕೃತ್ಯ ಎಸಗಿದೆ’ ಎಂದು ಬಿಜೆಪಿ ಸದಸ್ಯರು ಆರೋಪಿಸಿದ್ದಾರೆ.

ಇದೇ ವಿಚಾರವಾಗಿ ಕಳೆದ ನಾಲ್ಕು ದಿನಗಳಿಂದ ಬಿಜೆಪಿ ನಿರಂತರ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಸದಸ್ಯನನ್ನು ಹುಡುಕಿಕೊಂಡು ಬರಬೇಕು ಅಲ್ಲಿಯವರೆಗೂ ಚುನಾವಣೆ ಮುಂದೂಡಬೇಕು ಎಂದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಪೀಠ ಚುನಾವಣೆಗೆ ತಡೆಯೊಡ್ಡಿ ಸೋಮವಾರ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ