Breaking News

BMTC ನಿರ್ವಾಹಕ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ನಕಲು: ಸಿಕ್ಕಿಬಿದ್ದ ಅಭ್ಯರ್ಥಿ

Spread the love

ಧಾರವಾಡ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿರ್ವಾಹಕ (ಬಿಎಂಟಿಸಿ) ಹುದ್ದೆಗಳ ನೇಮಕಾತಿಗೆ ಭಾನುವಾರ ನಡೆದ ಪರೀಕ್ಷೆಯಲ್ಲಿ ನಗರದ ಬಾಶಲ್‌ ಮಿಷನ್‌ ವಿದ್ಯಾಲಯ ಕೇಂದ್ರದಲ್ಲಿ ಅಭ್ಯರ್ಥಿ ಸದಾಶಿವ ಸುಣದೊಳ್ಳಿ ನಕಲು ಮಾಡಿ ಸಿಕ್ಕಿಬಿದ್ದಿದ್ದಾರೆ.

ಬೆಳಿಗ್ಗೆ 10.30 ರಿಂದ 1230ರವರೆಗೆ ನಡೆದ ಮೊದಲ ಅವಧಿಯ ಪತ್ರಿಕೆಯಲ್ಲಿ ಅಕ್ರಮ ಮಾಡಿ ಸಿಕ್ಕಿಬಿದ್ದಿದ್ದಾರೆ.

ಸದಾಶಿವ ಅವರು ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಖಾನಟ್ಟಿ ಗ್ರಾಮದವರು.

‘ಅಭ್ಯರ್ಥಿಯು ವಾಂತಿ ಮಾಡಲು ಶೌಚಾಲಯಕ್ಕೆ ಹೋಗುವುದಾಗಿ ಕೊಠಡಿ ಮೇಲ್ವಿಚಾರಕರಿಗೆ ತಿಳಿಸಿ ಹೋಗಿ ಚೀಟಿಗಳನ್ನು ತಂದಿದ್ದಾರೆ. ಅಕ್ರಮ ಎಸಗಿರುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ವರದಿ ನೀಡಲಾಗಿದೆ. ಕೆಇಎಯವರು ಕ್ರಮ ಜರುಗಿಸುವರು. ಮಧ್ಯಾಹ್ನದ ಪತ್ರಿಕೆ ಪರೀಕ್ಷೆ ಬರೆಯಲು ಅಭ್ಯರ್ಥಿಗೆ ಅವಕಾಶ ನೀಡಲಾಗಿತ್ತು’ ಎಂದು ಪರೀಕ್ಷೆ ನೋಡೆಲ್‌ ಅಧಿಕಾರಿ ಸುರೇಶ್‌ ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ