ಬೆಂಗಳೂರು,ಸೆಪ್ಟೆಂಬರ್ 03: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಭರ್ಜರಿಯಾಗಿ ಕಾಂಗ್ರೆಸ್ ಗೆಲುವು ಸಾಧಿಸಲು ಪಂಚ ಗ್ಯಾರಂಟಿ ಯೋಜನೆಗಳೆ ಪ್ರಮುಖ ಕಾರಣವಾಗಿದ್ದು, ಇದೀದ ಕಾಂಗ್ರೆಸ್ ರಾಜ್ಯದ ಬಡವರಿಗಾಗಿ ಮತ್ತಷ್ಟು ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಂತ ಹಂತವಾಗಿ ಐದು ಗ್ಯಾರಂಟಿಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಯನ್ನ ಜಾರಿಗೊಳಿಸಿದೆ. ಈ ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬಡ ವರ್ಗಕ್ಕೆ ಸಾಕಷ್ಟು ಸಹಾಯಕವಾಗಿದ್ದು, ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನತೆ ಕಾಂಗ್ರೆಸ್ ಕೈ ಹಿಡಿದಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕಮಾರ್ ಹಲವು ಲೆಕ್ಕಾಚಾರವನ್ನ ಹಾಕಿಕೊಂಡಿದ್ದು, ಮತ್ತೆರಡು ಗ್ಯಾರಂಟಿ ಜಾರಿಗೆ ಪ್ಲಾನ್ ಹಾಕಿಕೊಂಡಿದ್ದಾರೆ.