Breaking News

ಇನ್ನೆರಡು ದಿನದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆ; ಪೊಲೀಸ್ ಆಯುಕ್ತರಿಂದ ಮಹತ್ವದ ಮಾಹಿತಿ

Spread the love

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಇನ್ನೆರಡು ದಿನಗಳಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಸಲಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಟ ದರ್ಶನ್ ತೂಗುದೀಪ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಕುರಿತಂತೆ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡರು.

ತನಿಖೆ ಮುಕ್ತಾಯವಾಗಿದ್ದು, ಕೆಲವು ವರದಿಗಳು ಬರಬೇಕಿದೆ ಎಂದು ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ತನಿಖೆ ಮುಕ್ತಾಯವಾಗಿದೆ. ಎಲ್ಲಾ 17 ಆರೋಪಿಗಳ ವಿರುದ್ಧ ಈಗಾಗಲೇ ಚಾರ್ಜ್‌ಶೀಟ್ ಸಿದ್ಧವಾಗಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ಚಾರ್ಜ್‌ಶೀಟ್ ನೀಡಿ ಅವರಿಂದ ಸಲಹೆಗಳನ್ನು ಕೂಡ ಪಡೆಯಲಾಗಿದೆ. ಚಾರ್ಜ್‌ಶೀಟ್ ನೋಡಿರುವ ಅವರು ಕೆಲವು ಬದಲಾವಣೆ ಮಾಡುವಂತೆ ಸಲಹೆ ಕೊಟ್ಟಿದ್ದು, ಇನ್ನೆರಡು ದಿನಗಳಲ್ಲಿ ಚಾರ್ಜ್‌ಶೀಟ್‌ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.

ಹೈದರಾಬಾದ್​ನ ವಿಧಿ ವಿಜ್ಞಾನ ಪ್ರಯೋಗಾಲದಿಂದ ಇನ್ನೂ ಹಲವು ವರದಿಗಳು ನಮ್ಮ ಕೈಸೇರಬೇಕಿದೆ. ಬೆಂಗಳೂರಿ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳು ಕೈ ಸೇರಿವೆ. ಸದ್ಯ ನಮ್ಮ ಬಳಿ ಇರುವ ವರದಿಗಳನ್ನೇ ಸಲ್ಲಿಕೆ ಮಾಡುತ್ತೇವೆ. ಉಳಿದ ವರದಿಗಳನ್ನು ಸಲ್ಲಿಕೆ ಮಾಡಲು ಸಮಯಾವಕಾಶ ಇರಲಿದೆ. ಇದೀಗ ತನಿಖೆಗೆ ಸಂಬಂಧಪಟ್ಟಂತೆ ಪ್ರಾಥಮಿಕ ವರದಿಯನ್ನು ಸಲ್ಲಿಕೆ ಮಾಡುತ್ತೇವೆ ಎಂದು ಹೇಳಿದರು.

ಎಲ್ಲಾ ಸಾಕ್ಷಿಗಳ ಸಂಗ್ರಹ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಈಗಾಗಲೇ 100ಕ್ಕೂ ಹೆಚ್ಚು ಮೆಟಿರಿಯಲ್ ಸಾಕ್ಷಿಗಳನ್ನು ಕಲೆ ಹಾಖಿದ್ದಾರೆ. ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದ ಚಿತ್ರದುರ್ಗ, ಕೊಲೆ ಮಾಡಿದ್ದಾರೆ ಎನ್ನಲಾದ ಪಟ್ಟಣಗೆರೆ ಶೆಡ್, ಶವ ಬಿಸಾಕಿದ ಸ್ಥಳ, ದರ್ಶನ್‌ರನ್ನು ಬಂಧಿಸಿದ ಮೈಸೂರಿನಲ್ಲಿ ಮಹಜರು ಮಾಡಲಾಗಿದೆ.

ಘಟನೆಗೆ ಸಂಬಂಧಪಟ್ಟಂತೆ ಹಲವು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಲಾಗಿದೆ. 100 ಕ್ಕೂ ಹೆಚ್ಚು ಜನರನ್ನು ವಿಚಾರಣೆ ನಡೆಸಿ ಅವರ ಹೇಳಿಕೆಗಳನ್ನು ದಾಖಲಿಸಲಾಗಿದೆ. ಎಲ್ಲಾ ಮಾಹಿತಿಗಳನ್ನು ಆರೋಪ ಪಟ್ಟಿಯಲ್ಲಿ ನಮೂದು ಮಾಡಲಾಗಿದೆ, ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ ಬಳಿಕ ಪ್ರಕರಣದ ಎಲ್ಲಾ ಮಾಹಿತಿ ತಿಳಿಯಲಿದೆ ಎಂದರು.

ದರ್ಶನ್ ಬಂಧನವಾಗಿ ಈಗಾಗಲೇ ಮೂರು ತಿಂಗಳಾಗುತ್ತಾ ಬಂದಿದೆ. ಎರಡು ತಿಂಗಳಿಗಿಂತ ಹೆಚ್ಚು ಕಾಲ ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿದ್ದ ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಚಾರ್ಜ್‌ಶೀಟ್ ಸಲ್ಲಿಕೆಯಾದ ಬಳಿಕ ದರ್ಶನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರನ್ನೇ ಎ1 ಮಾಡಲು ಪೊಲೀಸರು ಯೋಚಿಸಿದ್ದಾರೆ ಎನ್ನಲಾಗಿದೆ ಇದೆಲ್ಲಾ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ ಬಳಿಕವಷ್ಟೇ ತಿಳಿದುಬರಲಿದೆ.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ