ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ನಡುವೆ ರಾಜ್ಯ ಸರ್ಕಾರವು ಸಿಎಂ ಪತ್ನಿಗೆ 50:50 ಸೈಟ್ ಹಂಚಿಕೆ ಮಾಡಿದ್ದು ತಪ್ಪು ಎಂಬುದಾಗಿ ಸತ್ಯವನ್ನು ಒಪ್ಪಿಕೊಂಡಿದೆ.
ಮುಡಾ ಹಿಂದಿನ ಆಯುಕ್ತರ ಅಮಾನತು ಆದೇಶದಲ್ಲಿ ಈ ಸತ್ಯ ಬಯಲಾಗಿದೆ.
ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ರಾಜ್ಯ ಸರ್ಕಾರವೇ ಸಿಎಂ ಪತ್ನಿಗೆ 50:50 ಸೈಟ್ ಹಂಚಿಕೆ ಮಾಡಿದ್ದು ತಪ್ಪು ಎಂಬ ಸತ್ಯವನ್ನು ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತು ಆದೇಶದಲ್ಲಿ ಸತ್ಯ ಬಿಚ್ಚಿಟ್ಟಿದೆ. ಹೀಗಾಗಿ ಈ ಅಮಾನತು ಆದೇಶವೇ ಸಿಎಂ ಸಿದ್ಧರಾಮಯ್ಯ ಅವರಿಗೆ ಮತ್ತೆ ಮುಳುವಾಗುತ್ತಾ ಎನ್ನುವ ಕುತೂಹಲವನ್ನು ಮೂಡಿಸಿದೆ.