ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಇಲ್ಲಿನ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ, ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅಪಹರಣ ಪ್ರಕರಣದಿಂದ, ತೀವ್ರ ನೊಂದು ಅನಾರೋಗ್ಯಕ್ಕೆ ಈಡಾಗಿರುವ ಅವರ ತಾಯಿಯನ್ನು ಧಾರವಾಡ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೃದಯ ಸಂಬಂಧಿ ಕಾಯಿಲೆಯಿಂದ ಅವರು ಬಳಲುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ವೇದಿಕೆಯಲ್ಲಿ ಪುತ್ರನ ಅಪಹರಣ ಪ್ರಕರಣದಿಂದ ನೊಂದು ತಂದೆ ದುಃಖಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
‘ಬೆಂಗಳೂರಿನಲ್ಲಿ ನಾಗರಾಜ ಅರಾಮವಾಗಿ ತಿರುಗಾಡುತ್ತಿದ್ದಾನೆ ಎಂದು ಪೊಲೀಸರು ತಮ್ಮ ಬಳಿ ಇರುವ ವಿಡಿಯೊ ತೋರಿಸಿ ಹೇಳುತ್ತಿದ್ದಾರೆ. ಆದರೆ, ನಾಗರಾಜ ಅವರನ್ನು ಕರೆತರುವ ಯಾವುದೇ ಪ್ರಯತ್ನಗಳು ನಡೆಯುತ್ತಿಲ್ಲ’ ಎಂದು ಬಿಜೆಪಿ ಆರೋಪಿಸಿದೆ.
Laxmi News 24×7