Breaking News

ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ಮಹಿಳೆಯ ಮೇಲೆ ದೌರ್ಜನ್ಯಕ್ಕೆ ಮುಂದಾದ ನೌಕರ; ಬಂಧನ

Spread the love

ಹುಬ್ಬಳ್ಳಿ: ರೈಲ್ವೆ ಇಲಾಖೆಯಲ್ಲಿ ಕೆಲಸ ‌ಕೊಡಿಸುವುದಾಗಿ ನಂಬಿಸಿ ಇಲಾಖೆಯ ನೌಕರನೊಬ್ಬ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಮುಂದಾಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.

ನದೀಂ ಎಂಬಾತನನ್ನು ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನದೀಂ ನೈಋತ್ಯ ರೈಲ್ವೆಯ ಮುಖ್ಯ ಕಚೇರಿಯ ಆರ್ಥಿಕ ವಿಭಾಗದಲ್ಲಿ ಕ್ಲರ್ಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾನೆ.

ತನಗೆ ರೈಲ್ವೆ ನೇಮಕಾತಿ ವಿಭಾಗದಲ್ಲಿ ಪರಿಚಿತರಿದ್ದಾರೆ. ಕೆಲಸ ಕೊಡಿಸುವೆ, ಅದಕ್ಕಾಗಿ ಹಣ ಕೊಡುವಂತೆ ಹೇಳಿದ್ದಾನೆ. ಕೊಡಲು ಆಗದಿದ್ದರೆ ನಮ್ಮ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಬೇಕೆಂದು ಹೇಳಿ, ರೈಲ್ವೆ ಗೆಸ್ಟ್ ಹೌಸ್‌ ರೂಮ್‌ಗೆ ಕರೆಯಿಸಿಕೊಂಡಾಗ ಮಹಿಳೆಯು ಸಂಶಯಗೊಂಡು ತನ್ನ ಕುಟುಂಬಸ್ಥರಿಗೆ ಮಾಹಿತಿ ನೀಡಿದಾಗ ಕೇಶ್ವಾಪುರ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪೊಲೀಸರು ಆತನನ್ನು ಬಂಧಿಸಿದ್ದು, ನ್ಯಾಯಾಲಯದ ಅನುಮತಿ ಮೇರೆಗೆ ಆತನನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ. ನೌಕರಿ ಕೊಡಿಸುವುದಾಗಿ ಇದೇ ರೀತಿ ಎಷ್ಟು ಮಹಿಳೆಯರಿಗೆ ಹಾಗೂ ಜನರಿಗೆ ಮೋಸ ಮಾಡಿದ್ದಾನೆ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಆಯುಕ್ತ ಎನ್. ಶಶಿಕುಮಾರ್ ಸುದ್ದಿಗಾರರಿಗೆ ತಿಳಿಸಿದರು.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ