Breaking News

ರಾಜ್ಯ ಸರ್ಕಾರದಿಂದ ಹಾಲು ಉತ್ಪಾದಕರಿಗೆ ಬೆಲೆ ಕಡಿತದ ಗಿಫ್ಟ್:‌ ಜೋಶಿ ಆಕ್ರೋಶ

Spread the love

ಹುಬ್ಬಳ್ಳಿ: ಗಣೇಶ ಹಬ್ಬದ ವೇಳೆ ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಬೆಂಬಲ ಬೆಲೆಯ ಗಿಫ್ಟ್ ಕೊಟ್ಟರೆ, ರಾಜ್ಯ ಸರ್ಕಾರ ಹಾಲಿನ ಬೆಲೆ ಕಡಿತದ ಕೊಡುಗೆ ಕೊಟ್ಟಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.

ಬೆಲೆ ಕುಸಿತದ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯ ಖರೀದಿಸುತ್ತಿದೆ.

ಆದರೆ, ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಈಗಿರುವ ಬೆಲೆಯನ್ನೂ ಕಡಿತಗೊಳಿಸಿ ಹಾಲು ಖರೀದಿಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ರಾಜ್ಯ ಸರ್ಕಾರ, ರಾಜ್ಯದ ಹಾಲು ಉತ್ಪಾದಕರಿಗೆ ಕೊಡುವ ಬೆಲೆಯಲ್ಲಿ 1.5 ರೂ., 2 ರೂ. ವರೆಗೂ ಕಡಿತಗೊಳಿಸುವ ಮೂಲಕ ಹೈನುಗಾರರ ಶ್ರಮಕ್ಕೆ ತಣ್ಣೀರೆರೆಚುವ ಕೆಲಸ ಮಾಡಿದೆ ಎಂದು ಜೋಶಿ ಖಂಡಿಸಿದ್ದಾರೆ.

ಅತಿವೃಷ್ಟಿಯಿಂದಾಗಿ ರಾಜ್ಯದ ರೈತರು ಬೆಳೆ ಹಾನಿಯಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನೆರವಿಗೆ ಧಾವಿಸಿ ಹೆಸರು, ಉದ್ದು, ಸೂರ್ಯಕಾಂತಿ, ಸೋಯಾಬಿನ್ ಗೆ ಬೆಂಬಲ ಬೆಲೆ ಹೆಚ್ಚಿಸಿ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದೆ. ಆದರೆ, ರಾಜ್ಯ ಸರ್ಕಾರದ ಹಾಲು ಒಕ್ಕೂಟಗಳು ರೈತರಿಗೆ ನೀಡುವ ಹಾಲಿನ ದರ ಕಡಿತಗೊಳಿಸಿ ಹೈನುಗಾರರನ್ನು ಹೈರಾಣಾಗಿಸಿದೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ