Breaking News

CM ಕುರ್ಚಿ ಅಲ್ಲಾಡುತ್ತಿದೆ ಎನ್ನುವ ಭಾವನೆ ಕಾಂಗ್ರೆಸ್ ನಲ್ಲಿ ಸೃಷ್ಟಿಯಾಗಿದೆ: ಬೊಮ್ಮಾಯಿ

Spread the love

ದಗ: ಕಾಂಗ್ರೆಸ್ ನಲ್ಲಿ ಆಂತರಿಕವಾಗಿ ಗೊಂದಲ ಸೃಷ್ಟಿಯಾಗಿದೆ. ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡುತ್ತಿದೆ ಅನ್ನುವ ಭಾವನೆ ಸೃಷ್ಟಿಯಾಗಿದೆ. ಸಿಎಂ ಕುರ್ಚಿ ಮೇಲೆ ಕೂರಬೇಕೆಂಬ ಆಸೆ ಈಗ ಹೊರ ಹೊಮ್ಮುತ್ತಿದೆ. ಇದು ಸಹಜ ಪ್ರಕ್ರಿಯೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.

 

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಸರಿ ಇದೆ ಅಂತ ಹೇಳುತ್ತಲೇ ಒಳಗಡೆಯಿಂದ ದೋಣಿಗೆ ತೂತು ಕೊರೆಯುವುದು ರಾಜಕಾರಣ. ಕರ್ನಾಟಕದ ಇತಿಹಾಸ ನೋಡಿದಾಗ ಕಾಂಗ್ರೆಸ್ ನಲ್ಲಿ ವಿರೇಂದ್ರ ಪಾಟೀಲರು ಅತ್ಯಂತ ಬಲಿಷ್ಠ ಮುಖ್ಯಮಂತ್ರಿಗಳಾಗಿದ್ದರು, ಅವರ ಅವಧಿಯಲ್ಲಿ ರಾತ್ರೋ ರಾತ್ರಿ ಎಲ್ಲ ಶಾಸಕರು ಬದಲಾದರು. ಮುಂದೆ ದೇವರಾಜ್ ಅರಸು ಅವರನ್ನು ರಾತ್ರೋರಾತ್ರಿ ಬದಲಾವಣೆ ಮಾಡಿ ಆರ್. ಗುಂಡೂರಾವ್ ಅವರು ಮುಖ್ಯಮಂತ್ರಿಗಳಾದರು. ದೇವರಾಜ ಅರಸು ಅವರು ಎರಡನೇ ಬಾರಿ ಸ್ವಂತ ಶಕ್ತಿಯಲ್ಲಿ‌ ಆರಿಸಿ ಸಿಎಂ ಆದವರು. ಎಸ್. ಬಂಗಾರಪ್ಪ ಅವರಿಗೆ 183 ಶಾಸಕರ ಬಲವಿತ್ತು. ಆಗಲೂ ಸಿಎಂ ಬದಲಾದರು. ಈ ರಾಜಕಾರಣ ನಡಿಯುತ್ತಾ ಇರುತ್ತದೆ ಎಂದರು.

ರಾಜ್ಯ ಸರ್ಕಾರ ಕಳೆದ ಒಂದು ವರ್ಷದಿಂರ ಏನೂ ಕೆಲಸ ಮಾಡಿಲ್ಲ. ಜನ ಭ್ರಮನಿರಸನರಾಗಿದ್ದಾರೆ, ಆಡಳಿತ ಪಕ್ಷದ ಶಾಸಕರೂ ಭ್ರಮನಿಸರನರಾಗಿದ್ದಾರೆ. ಇದೂ ಕೂಡ ಒಂದು ಪ್ರಮುಖ ಕಾರಣ. ಕಾಂಗ್ರೆಸ್ ನಲ್ಲಿ ಆಂತರಿಕವಾಗಿ ಗೊಂದಲ ಸೃಷ್ಟಿಯಾಗಿದೆ. ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡುತ್ತಿದೆ ಅನ್ನುವ ಭಾವನೆ ಸೃಷ್ಟಿಯಾಗಿದೆ. ಸಿಎಂ ಕುರ್ಚಿ ಮೇಲೆ ಕೂರಬೇಕೆಂಬ ಆಸೆ ಈಗ ಹೊರ ಹೊಮ್ಮುತ್ತಿದೆ ಎಂದರು.


Spread the love

About Laxminews 24x7

Check Also

ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಅವಳಿನಗರದಲ್ಲಿನ 400 ಡ್ರಗ್ ಪೆಡ್ಲರ್ಸ್ ಹಾಗೂ ಸೇವನೆ ಮಾಡುವವರ ಪರೇಡ್

Spread the love ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ