Breaking News

ಮೊಬೈಲ್ ಬಳಸಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ನೇಣಿಗೆ ಶರಣಾದ ಮಗ

Spread the love

ಹುಬ್ಬಳ್ಳಿ: ಅತಿಯಾಗಿ ಮೊಬೈಲ್‌ ಬಳಸಬೇಡ ಎಂದು ಪಾಲಕರು ಅಪ್ರಾಪ್ತ ಮಗನಿಗೆ ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ನೇಣಿಗೆ ಶರಣಾದ ಘಟನೆ ನಗರದ ಗಾಮನಗಟ್ಟಿ ರಸ್ತೆಯ ರಾಧಿಕಾ ಪಾರ್ಕ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ.

ಸಮೃದ್ದ ಭೈರಿದೇವರಕೊಪ್ಪ (13) ಎಂಬಾತನೆ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈತನಿಗೆ ಪೋಷಕರು ಮೊಬೈಲ್ ಹೆಚ್ಚು ಬಳಸಬೇಡ. ಸರಿಯಾಗಿ ವಿದ್ಯಾಭ್ಯಾಸ ಮಾಡು ಎಂದು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಎಪಿಎಂಸಿ-ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ