Breaking News

ಈದ್ಗಾದಲ್ಲಿ ಗಣೇಶೋತ್ಸವ: ಪಾಲಿಕೆಯಿಂದ ಅನುಮತಿ

Spread the love

ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ರಾಣಿ ಚನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರಸ್ತುತ ವರ್ಷವೂ ಮೂರು ದಿನಗಳ ಅನುಮತಿ ನೀಡಿದೆ. ಮಂಡಳಿಯ ಪದಾಧಿಕಾರಿಗಳಿಗೆ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅನುಮತಿ ಪತ್ರ ವಿತರಿಸಿದರು.

 

‘ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಸೆಪ್ಟೆಂಬರ್ 7 ರಿಂದ 9ರವರೆಗೆ ಉತ್ಸವ ಆಚರಿಸಬಹುದು. ಸೂಚಿಸಿದ ಜಾಗದಲ್ಲೇ ಪೆಂಡಾಲ್‌ ಹಾಕಬೇಕು. ಬೇರೆ ಯಾವುದೇ ರೀತಿ ಬಾವುಟ, ಪ್ರಚೋದನಕಾರಿ ಭಾವಚಿತ್ರ, ಭಿತ್ತಿ ಪತ್ರ, ಬ್ಯಾನರ್, ಬಂಟಿಂಗ್ಸ್ ಅಳವಡಿಸಬಾರದು. 19 ಷರತ್ತುಗಳನ್ನೂ ಪಾಲಿಸಬೇಕು’ ಎಂದು ಪಾಲಿಕೆ ಆಯುಕ್ತರು ತಿಳಿಸಿದರು.

‘ಕಳೆದ ವರ್ಷದಂತೆ ಈ ಸಲವೂ ನಮ್ಮ ಮಹಾಮಂಡಳಕ್ಕೆ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಸಿಕ್ಕಿದೆ. ಉತ್ಸವಕ್ಕೆ ಸಿದ್ಧತೆ ನಡೆದಿದೆ’ ಎಂದು ಮಹಾಮಂಡಳದ ಅಧ್ಯಕ್ಷ ಸಂಜೀವ ಬಡಸ್ಕರ್‌ ಹೇಳಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ