Breaking News

ಮಳೆ: ಹಳ್ಳದಲ್ಲಿ ಕೊಚ್ಚಿ ಹೋದ ಯುವಕ

Spread the love

ರಾಯಚೂರು: ಜಿಲ್ಲೆಯ ವಿವಿಧೆಡೆ ಮಂಗಳವಾರ ದಿನವಿಡೀ ಸುರಿದ ಜಿಟಿಜಿಟಿ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಠಿಯಾಯಿತು.

ತಾಲ್ಲೂಕಿನ ಪತ್ತೆಪುರ ಗ್ರಾಮದ ಹಳ್ಳ ದಾಟುತ್ತಿದ್ದ ಜಾಗೀರ ವೆಂಕಟಾಪುರ ಗ್ರಾಮದ ಯುವಕ ಬಸವರಾಜ (33) ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ರಾಯಚೂರು | ಮಳೆ: ಹಳ್ಳದಲ್ಲಿ ಕೊಚ್ಚಿ ಹೋದ ಯುವಕ

ಮಂಗಳವಾರ ರಾತ್ರಿ ಮಳೆ ಸುರಿದಿದೆ. ಹಳ್ಳದಲ್ಲಿ ರಭಸವಾಗಿ ನೀರು ಹರಿಯುತ್ತಿತ್ತು. ಬಸವರಾಜ ಸೇರಿ ಸುಮಾರು 8 ಜನ ಪರಸ್ಪರ ಕೈ ಹಿಡಿದುಕೊಂಡು ಹಳ್ಳ ದಾಟುತ್ತಿದ್ದರು. ಬಸವರಾಜ ಅವರು ಕೈಯಲ್ಲಿ ಹೆಲ್ಮೆಟ್ ಹಿಡಿದಿದ್ದರು. ಅದು ನೀರಿನಲ್ಲಿ ಬಿದ್ದ ಕಾರಣ ಕೈಬಿಟ್ಟಿದ್ದಾರೆ. ಹೀಗಾಗಿ ಆಯತಪ್ಪಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಬಸವರಾಜ ಅವರು ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದರು ಎಂದು ತಿಳಿದು ಬಂದಿದೆ. ಈ ಕುರಿತು ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರಿನ ಸಿಯತಲಾಬ್, ನೀರಭಾವಿಕುಂಟಾ, ಜಲಾಲ್ ನಗರ, ಚಂದ್ರಬಂಡಾ ರಸ್ತೆಯ ಆಶ್ರಯ ಕಾಲೊನಿ ಸೇರಿದಂತೆ ಅನೇಕ ತಗ್ಗು ಪ್ರದೇಶದ ಬಡಾವಣೆಗಳಿಗೆ ನೀರು ನುಗ್ಗಿದೆ. ನಗರದ ರಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಭಾರಿ ನೀರು ನಿಂತಿದ್ದರಿಂದ ರೋಗಿಗಳು, ಸಂಬಂಧಿಕರು ಪರದಾಡಿದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ