ಮುಂಬೈ: ಮೊಬೈಲ್ ಕೊಡಲು ನಿರಾಕರಿಸಿದ ವ್ಯಕ್ತಿಯೋರ್ವನ ಮೇಲೆ ತಲ್ವಾರ್ನಿಂದ ಹಲ್ಲೆ ನಡೆಸಿರುವ ಭೀಕರ ಘಟನೆ ಮುಂಬೈನ ಧಾರಾವಿಯಲ್ಲಿ ಬುಧವಾರ ನಡೆದಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆಯಲ್ಲಿ ಯುವಕರ ಗುಂಪು ಜನನಿಬಿಡ ಪ್ರದೇಶದಲ್ಲಿ ತಲ್ವಾರ್ನಿಂದ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ.
ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಮಂಗಳವಾರ ಘಟನೆ ನಡೆದಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ದಾರಿಯಲ್ಲಿ ಸಾಗುತ್ತಿದ್ದ ಯುವಕನನ್ನು ತಡೆದ ಮತ್ತೊಬ್ಬ ಯುವಕ ಮೊಬೈಲ್ ಕೊಡುವಂತೆ ಒತ್ತಾಯಿಸಿದ್ದಾನೆ. ಆಗ ಯುವಕ ಮೊಬೈಲ್ ನೀಡಲು ನಿರಾಕರಿಸಿದ್ದು, ನಂತರ ಯುವಕನ ಮೇಲೆ ತಲ್ವಾರ್ನಿಂದ ಹಲ್ಲೆ ನಡೆಸುತ್ತಿರುವುದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ ವೀಡಿಯೋದಲ್ಲಿ ಕಾಣಬಹುದಾಗಿದೆ. ನಂತರ ಹಲ್ಲೆ ನಡೆಸಿದ ಯುವಕನನ್ನು ನಿಯಂತ್ರಿಸಲು ಮತ್ತಿಬ್ಬರು ಯತ್ನಿಸುತ್ತಾರೆ.
Laxmi News 24×7