Breaking News

ಬೆಳಗಾವಿ | ಭಾರತೀಯ ಹಬ್ಬಗಳ ಮೂಲ ಆಶಯವೇ ಪರಿಸರ ಸಂರಕ್ಷಣೆ: ಮಂಜುನಾಥ ಶರಣಪ್ಪ

Spread the love

ಬೆಳಗಾವಿ: ‘ಭಾರತೀಯ ಹಬ್ಬಗಳು ಪರಿಸರವನ್ನು ಪೂಜಿಸಿ, ಅದರ ಪ್ರಾಮುಖ್ಯತೆಯನ್ನು ಜನಸಾಮಾನ್ಯರಿಗೆ ತಿಳಿಸುತ್ತ ಬಂದಿವೆ. ಮಣ್ಣು, ನೀರು, ಗಾಳಿಯಲ್ಲಿ ದೈವ ಕಾಣುವ ಕಾಣುವ ಭಾರತೀಯ ಹಬ್ಬಗಳ ಮೂಲ ಆಶಯವೇ ಪರಿಸರ ಸಂರಕ್ಷಣೆ’ ಎಂದು ಪ್ರಾಧ್ಯಾಪಕ ಮಂಜುನಾಥ ಶರಣಪ್ಪನವರ ಹೇಳಿದರು.

 

ಇಲ್ಲಿನ ಶಿವಬಸವ ನಗರದ ಸಿದ್ಧರಾಮೇಶ್ವರ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಅಟಲ್ ಟಿಂಕರಿಂಗ್ ಲ್ಯಾಬ್‌ನಲ್ಲಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಡಾ. ಸ.ಜ.ನಾಗಲೋಟಿಮಠ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಪರಿಸರ ಸ್ನೇಹಿ ಗಣೇಶೋತ್ಸವದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಂಡಳಿಯ ಪ್ರಾದೇಶಿಕ ಪರಿಸರ ಅಧಿಕಾರಿ ಶೋಭಾ ಪೋಳ, ‘ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶನ ಮೂರ್ತಿಗಳ ಬಳಕೆ, ಮಾರಾಟವನ್ನು ಸರ್ಕಾರ ನಿಷೇಧಿಸಿದೆ. ಸಾರ್ವಜನಿಕರು ಅಂಥ ಮೂರ್ತಿ ಬಳಸಬಾರದು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಉಪಪ್ರಾಚಾರ್ಯೆ ಮಾತನಾಡಿದರು. ಜಿ.ಎಂ.ಪಾಟೀಲ ಉಪಸ್ಥಿತರಿದ್ದರು. ವಿಜ್ಞಾನ ಕೇಂದ್ರದ ಯೋಜನಾಧಿಕಾರಿ ರಾಜಶೇಖರ ಪಾಟೀಲ ಸ್ವಾಗತಿಸಿದರು. ಮನೋಹರ ಉಳ್ಳೇಗಡ್ಡಿ ನಿರೂಪಿಸಿದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ