ಗದಗ: ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಜಪ್ತಿ ಮಾಡಲಾಗಿದೆ.
ಗದಗ ನಗರದ ದಾಸರ ಓಣಿಯ ಜನನಿಬಿಡ ಪ್ರದೇಶದಲ್ಲಿ ಪಟಾಕಿ ಜಪ್ತಿ ಮಾಡಲಾಗಿದೆ. ರಾಮಚಂದ್ರ ಸಿದ್ದಲಿಂಗ ಎಂಬುವರ ಮನೆಯಲ್ಲಿ ಪಟಾಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿತ್ತು.
ಗದಗ ಶಹರ ಠಾಣೆ ಸಿಪಿಐ ಡಿ.ಬಿ. ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Laxmi News 24×7