Breaking News

ವೀರಶೈವ ಲಿಂಗಾಯತರಿಗೆ ಬಂಪರ್ ಮೇಲೆ ಬಂಪರ್ ಸಿಗುತ್ತಿದೆ.

Spread the love

ಬೆಂಗಳೂರು: ವೀರಶೈವ ಲಿಂಗಾಯತರಿಗೆ ಬಂಪರ್ ಮೇಲೆ ಬಂಪರ್ ಸಿಗುತ್ತಿದೆ. ಲಿಂಗಾಯತ ಸಮುದಾಯಕ್ಕೆ ಯಡಿಯೂರಪ್ಪ ಬಿಗ್ ಗಿಫ್ಟ್ ನೀಡಲಿದ್ದಾರೆ. ಮೊನ್ನೆಯಷ್ಟೇ ಲಿಂಗಾಯತ ನಿಗಮ ಸ್ಥಾಪನೆ ಆದೇಶ ನೀಡಿದ್ದ ಸಿಎಂ, ನಿಗಮಕ್ಕೆ 500 ಕೋಟಿ ಆರಂಭಿಕ ಅನುದಾನ ಘೋಷಿಸಿದ್ದರು. ಇದೀಗ ಲಿಂಗಾಯತ ಸಮುದಾಯಕ್ಕೆ ಮತ್ತಷ್ಟು ಬಂಪರ್ ಗಿಫ್ಟ್ ನೀಡಲಿದ್ದಾರೆ.

ಲಿಂಗಾಯತ ಓಲೈಕೆಗೆ ಯಡಿಯೂರಪ್ಪ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದ್ದಾರೆ. ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯ ಸೇರ್ಪಡೆಗೆ ಶಿಫಾರಸು ಮಾಡಲಿದ್ದಾರೆ. ತರಾತುರಿಯಲ್ಲಿ ಕ್ಯಾಬಿನೆಟ್ ಅಜೆಂಡಾಗೆ ಸೇರಿಸಿರುವ ಸಿಎಂ, ಕೇಂದ್ರಕ್ಕೆ ಶಿಫಾರಸು ಕಳಿಸುವಲ್ಲಿ ತಯಾರಿ ನಡೆಸುತ್ತಿದ್ದಾರೆ ಎಂಬ ಮಾಹಿತಿ  ಲಭ್ಯವಾಗಿದೆ.

ಇಂದು ಬೆಳಗ್ಗೆ 10.30ಕ್ಕೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಬಳಿಕ ಸಿಎಂ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಿಎಂ ಈ ಬಗ್ಗೆ ಖುದ್ದು ಘೋಷಣೆ ಮಾಡಲಿದ್ದಾರೆ. ನಿನ್ನೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮುಖ್ಯಮಂತ್ರಿಗಳನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದರು. ಈ ವೇಳೆ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 2ಎಗೆ ಸೇರಿಸಬೇಕು ಎಂದು ಮನವಿ ಮಾಡಿದ್ದರು. ಆಗ ಸಿಎಂ, ಕೆಲವೇ ದಿನಗಳಲ್ಲಿ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದ್ದರು ಎನ್ನಲಾಗಿದೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ