Breaking News

ಸಚಿವರಿಗೆ ಸಿಟ್ಟಿನಿಂದಲೇ ಕ್ಲಾಸ್ ತೆಗೆದುಕೊಂಡರು.ಸಿಎಂ

Spread the love

ಬೆಂಗಳೂರು:- ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರ ವಿರುದ್ಧವೇ ಸಿದ್ದರಾಮಯ್ಯ ಸಿಟ್ಟಾಗಿದ್ದಾರೆ.

ಕೆಲವು ಮಂದಿ ಸಚಿವರು ಅಧಿಕಾರಿಗಳನ್ನು ‘ಸರ್, ಸರ್’ ಎಂದು ಸಂಬೋಧಿಸಿ ಮಾತನಾಡುತ್ತಿದ್ದರು.

ಇದನ್ನು ಕಂಡ ಸಿಎಂ ಸಿದ್ದರಾಮಯ್ಯ ಸಿಟ್ಟಾದರು. ಅಷ್ಟೇ ಅಲ್ಲ, ಕೆಲವು ಸಚಿವರಿಗೆ ಸಿಟ್ಟಿನಿಂದಲೇ ಕ್ಲಾಸ್ ತೆಗೆದುಕೊಂಡರು.

ಯಾವೊಬ್ಬ ಸಚಿವರೂ ಅಧಿಕಾರಿಗಳನ್ನು ‘ಸರ್’ ಎಂದು ಕರೆಯಕೂಡದು ಎಂದು ಅಧಿಕಾರಿಗಳೆದುರಿಗೇ ನೇರವಾಗಿ ಸಿಎಂ ಹೇಳಿದರು. ಸಾಂವಿಧಾನಿಕವಾಗಿ ನೀವು (ಸಚಿವರು) ಇಲಾಖೆಯ ನಾಯಕರು. ಅಧಿಕಾರಿ ವರ್ಗ ನಿಮ್ಮ ಕೈಯಡಿ ಇದೆ. ನೀವೇ ಅಧಿಕಾರಿಗಳಿಗೆ ‘ಸರ್, ಸರ್’ ಎನ್ನುವ ಮೂಲಕ ಮಂತ್ರಿ ಸ್ಥಾನವನ್ನು ಕಡೆಗೆಣಿಸುತ್ತಿದ್ದೀರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಇಲಾಖೆ ಬಗ್ಗೆ ಮಾಹಿತಿ ಕೊರತೆ ಇದ್ದರೆ ಅದಕ್ಕೆ ಬೇಕಾದ ಸೂಕ್ತ ಮಾಹಿತಿ ಅಧಿಕಾರಿಗಳಿಂದ ತರಿಸಿಕೊಳ್ಳಿ. ಅದರ ಬದಲಾಗಿ ಅದೇ ಇಲಾಖೆಯ ಇನ್ನೋರ್ವ ಅಧಿಕಾರಿಗೆ ‘ಸರ್ ಸರ್’ ಎಂದರೆ ಹೇಗೆ? ಅಧಿಕಾರಿಗಳು ಸದಾ ಆ ಸ್ಥಾನಕ್ಕೆ ಗೌರವಿಸುವಂತೆ ನಿಮ್ಮ ವರ್ತನೆ ಸಹ ಇರಬೇಕು ಎಂದು ಸಿಎಂ ನಿರ್ದೇಶನ ನೀಡಿದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ