ಹುಬ್ಬಳ್ಳಿ, ಸೆಪ್ಟೆಂಬರ್ 06: ಮುಡಾ ಹಾಗೂ ವಾಲ್ಮೀಕಿ ಹಗರಣದಲ್ಲಿಯೇ ಸರ್ಕಾರ, ಪ್ರತಿಪಕ್ಷಗಳು ಕಾಲಹರಣ ಮಾಡುತ್ತಿದೆ. ಇದರಿಂದ ರಾಜ್ಯದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ ಎಂದು ಕಾಂಗ್ರೆಸ್ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಮಾಜಿ ಸಚಿವ ಸಿ.ಎಂ ಇಬ್ರಾಹಿಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷದಿಂದ ಆರೋಪ ಹಾಗೂ ಪ್ರತ್ಯಾರೋಪದಲ್ಲಿಯೇ ಕಾಲಹರಣ ಹಾಕಲಾಗುತ್ತಿದ್ದು, ಸರಿಯಾಗಿ ನಮ್ಮ ವಿರೋಧ ಪಕ್ಷ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿಲ್ಲ. ನಿರುದ್ಯೋಗ, ಅತಿವೃಷ್ಟಿ, ಅನಾವೃಷ್ಟಿ ಕಾಡುತ್ತಿದೆ. ಲೋಕೋಪಯೋಗಿ ನೀರಾವರಿ ಸೇರಿದಂತೆ ಅನೇಕ ಇಲಾಖೆಯಲ್ಲಿ ಬಿಲ್ ಆಗುತ್ತಿಲ್ಲ. ಇನ್ನಷ್ಟು ದಿನ ಹೋದರೆ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳು ಪರಿಸ್ಥಿತಿ ಬರುತ್ತದೆ ಎಂದರು.
Laxmi News 24×7