Breaking News

ಪರಿಶಿಷ್ಟ ವಿದ್ಯಾರ್ಥಿಗಳಿಗೆ ಸಿಗಬೇಕಾದ ಹಾಸಿಗೆ, ದಿಂಬಿನಲ್ಲೂ ಸರ್ಕಾರ ಲೂಟಿ ಹೊಡೆದಿದೆ : ಬಿಜೆಪಿ ಗಂಭೀರ ಆರೋಪ

Spread the love

ಬೆಂಗಳೂರು : ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲಿ ಮೂಲಭೂತ ಸೌಕರ್ಯಗಳಾದ ಹಾಸಿಗೆ, ದಿಂಬು ಕುರಿತಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ನಯಾಪೈಸೆ ಕೂಡ ಅನುದಾನ ನೀಡಿಲ್ಲ. ಹೀಗಾಗಿ ವಿದ್ಯಾರ್ಥಿಗಳಿಗೆ ನೀಡುವ ಹಾಸಿಗೆ ದಿಂಬಿನಲ್ಲೂ ಸರ್ಕಾರ ಲೂಟಿ ಮಾಡಿದೆ ಎಂದು ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಪರಿಶಿಷ್ಟ ವಿದ್ಯಾರ್ಥಿಗಳಿಗೆ ಸಿಗಬೇಕಾದ ಹಾಸಿಗೆ, ದಿಂಬಿನಲ್ಲೂ ಸರ್ಕಾರ ಲೂಟಿ ಹೊಡೆದಿದೆ : ಬಿಜೆಪಿ ಗಂಭೀರ ಆರೋಪ

ಈ ಕುರಿದಂತೆ ಟ್ವೀಟ್ ನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿರುವ ಬಿಜೆಪಿ, ಶೋಷಿತ ಸಮುದಾಯವನ್ನು ಚುನಾವಣೆ ಬಂದಾಗ ಮಾತ್ರ ಓಲೈಸಲು ಹವಣಿಸುವ ರಾಜ್ಯ ಕಾಂಗ್ರೆಸ್ ಸರ್ಕಾರ ನಿತ್ಯ ಶೋಷಿಸುವ ಮೂಲಕ ಮಜಾ ತೆಗೆದುಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಕರ್ನಾಟಕದ ವಸತಿ ಶಿಕ್ಷಣ ಸಂಘಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ವಸತಿ ಶಾಲೆಗಳ ಮೂಲ ಸೌಕರ್ಯಗಳಿಗಾಗಿ 2024-25ರ ಬಜೆಟ್ ನಲ್ಲಿ ನಯಾ ಪೈಸೆ ನೀಡಿಲ್ಲ. ಹೀಗಾಗಿ, ಪರಿಶಿಷ್ಟ ವಿದ್ಯಾರ್ಥಿಗಳು ಹರಿದ ಹಾಸಿಗೆ, ಧೂಳು ಹಿಡಿದ ದಿಂಬು, ಮುರುಕು ಡೆಸ್ಕ್‌ನಲ್ಲೇ ದಿನ ದೂಡುವಂತಾಗಿದೆ.

ಬೆಳೆದು ಬಂದ ಸಮಾಜಕ್ಕೆ ದ್ರೋಹ ಬಗೆದ HC ಮಹದೇವಪ್ಪ ನವರು ಕಣ್ಮುಚ್ಚಿ ಕುಳಿತ ಪರಿಣಾಮ ಶೋಷಿತರಿಗೆ ಸಿಗಬೇಕಾದ ಅನುದಾನ, ಸೌಲಭ್ಯ ಸಿಗುತ್ತಿಲ್ಲ. ಹಾಸಿಗೆ-ದಿಂಬಿನಲ್ಲೂ ಲೂಟಿ ಹೊಡೆದು ವಂಚಿಸಿದ್ದ ಸರ್ಕಾರವೀಗ ಅನುದಾನ ನೀಡದೆ ಪರಿಶಿಷ್ಟ ವಿದ್ಯಾರ್ಥಿಗಳಿಗೆ ದ್ರೋಹ ಬಗೆದಿದೆ. ಸಿಎಂ ಸಿದ್ದರಾಮಯ್ಯ ಅವರೇ, ಎಸ್.ಸಿ-ಎಸ್.ಟಿ ಸಮುದಾಯದ ಮೇಲೆ ನಿಮಗ್ಯಾಕೆ ಈ ಪರಿ ದ್ವೇಷ.? ಎಂದು ಕಿಡಿ ಕಾರಿದೆ


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ