ಬೆಂಗಳೂರು, ಸೆಪ್ಟಂಬರ್ 07: ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿರುವ ನಟ ದರ್ಶನ್ ವಿರುದ್ಧ ಒಂದೊಂದೇ ಸಾಕ್ಷ್ಯಗಳು ಬಯಲಾಗುತ್ತಿವೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇತ್ತೀಚೆಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಅದರಲ್ಲಿ ನಟ ದರ್ಶನ್ ವಿರುದ್ಧ ಯಾವೆಲ್ಲ ಸಾಕ್ಷ್ಯಗಳು ಸಿಕ್ಕಿವೆ ಎಂಬುದು ಬಹಿರಂಗವಾಗಿದೆ. ಈ ಪೈಕಿ ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಶೇಡ್ ಮಣ್ಣು ಸಹ ಪ್ರಮುಖ ಸಾಕ್ಷಿಯಾಗಿದೆ.
ಹೌದು, ಶೆಡ್‌ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಆತನ ಸಾವಿನ ಬಳಿಕ ನಟ ದರ್ಶನ್ ಮತ್ತವರ ಸಹಚರರು ಸಾಕ್ಷಿ ನಾಶಕ್ಕೆ ಪ್ರಯತ್ನಪಟ್ಟಿದ್ದು ಜಗಜ್ಜಾಹೀರಾಗಿದೆ.
ಅಂದು ನಟ ದರ್ಶನ್ ಶೆಡ್‌ನಲ್ಲಿನ ಹತ್ಯೆ ಘಟನೆ ಬಳಿಕ ತನ್ನ ಬಟ್ಟೆ, ಶೂಗಳನ್ನು ವಿಜಯಲಕ್ಷ್ಮೀ ಮನೆಗೆ ಸಾಗಿಸಿದ್ದ. ದರ್ಶನ್ ಹಾಗೂ ಆತನ ಸಹಚರರ ಶೂಗಳನ್ನು ವಶಕ್ಕೆ ಪಡೆದಿದ್ದ ತನಿಖಾಧಿಖಾರಿಗಳು ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಕಳುಹಿಸಿದ್ದರು
Laxmi News 24×7