Breaking News

ಟೆಸ್ಟ್ ಕ್ರಿಕೆಟ್‌ನಲ್ಲಿ ಅಬ್ಬರಿಸುವ ಸೂಚನೆ ಕೊಟ್ಟ ರಿಷಬ್ ಪಂತ್

Spread the love

ಪಘಾತದ ಬಳಿಕ ಸುದೀರ್ಘ ವಿಶ್ರಾಂತಿ ಪಡೆದಿದ್ದ ರಿಷಬ್ ಪಂತ್ ಮತ್ತೆ ಕ್ರಿಕೆಟ್ ಗೆ ಮರಳಿದ್ದಾರೆ. ಐಪಿಎಲ್‌ನಲ್ಲಿ ಅಷ್ಟೇನೂ ಮಿಂಚದೇ ಇದ್ದರೂ, ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಹಳೆಯ ಆಟದ ಝಲಕ್ ತೋರಿಸಿದ್ದಾರೆ. ದುಲೀಪ್ ಟ್ರೋಫಿ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಟೆಸ್ಟ್‌ ಆಡಲು ನಾನು ಮತ್ತೆ ರೆಡಿ ಎನ್ನುವ ಸೂಚನೆ ಕೊಟ್ಟಿದ್ದಾರೆ.

Rishabh Pant: ಟೆಸ್ಟ್ ಕ್ರಿಕೆಟ್‌ನಲ್ಲಿ ಅಬ್ಬರಿಸುವ ಸೂಚನೆ ಕೊಟ್ಟ ರಿಷಬ್ ಪಂತ್

2020 ರಿಂದ 2022 ರವರೆಗೆ ಭಾರತದ ಅತ್ಯುತ್ತಮ ಟೆಸ್ಟ್ ಬ್ಯಾಟರ್ ಆಗಿದ್ದ ರಿಷಬ್ ಪಂತ್, ಹಲವು ಮರೆಯಲಾಗದ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. 20 ತಿಂಗಳ ಬಳಿಕ ತಮ್ಮ ಮೊದಲ ಪ್ರಥಮ ದರ್ಜೆ ಪಂದ್ಯ ಆಡುತ್ತಿರುವ ಪಂತ್, ರೆಡ್ ಬಾಲ್ ಕ್ರಿಕೆಟ್‌ನಲ್ಲಿ ತಾನು ಫಾರ್ಮ್‌ನಲ್ಲಿದ್ದೇನೆ ಎಂದು ತೋರಿಸಿದ್ದಾರೆ. ಭಾರತ ಎ ಮತ್ತು ಭಾರತ ಬಿ ತಂಡಗಳ ನಡುವಿನ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ್ದಾರೆ.

ಇಂಡಿಯಾ ಬಿ ತಂಡದ ವಿಕೆಟ್ ಕೀಪರ್ ಆಗಿರುವ ರಿಷಬ್ ಪಂತ್, ಭಾರತ ಬಿ ತಂಡದ ಎರಡನೇ ಇನ್ನಿಂಗ್ಸ್‌ನಲ್ಲಿ 47 ಎಸೆತಗಳಲ್ಲಿ 9 ಬೌಂಡರಿ 2 ಸಿಕ್ಸರ್ ಸಹಿತ 61 ರನ್ ಗಳಿಸಿ ಮಿಂಚಿದರು. ಅವರ ಭರ್ಜರಿ ಅರ್ಧಶತಕದ ನೆರವಿನಿಂದ ಭಾರತ ಬಿ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ ಮೂರನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 150 ರನ್ ಗಳಿಸಿದ್ದು, 240 ರನ್‌ಗಳ ಮುನ್ನಡೆ ಪಡೆದುಕೊಂಡಿದೆ.

ರಿಷಬ್ ಪಂತ್ ತಮ್ಮ ಕೊನೆಯ ಪ್ರಥಮ ದರ್ಜೆ ಪಂದ್ಯ (ಟೆಸ್ಟ್) ಡಿಸೆಂಬರ್ 2022 ರಲ್ಲಿ ಬಾಂಗ್ಲಾದೇಶದ ವಿರುದ್ಧ ಮೀರ್‌ಪುರದಲ್ಲಿ ಆಡಿದ್ದರು. ಅಂದಿನ ಪಂದ್ಯದಲ್ಲೂ ಅವರು 91 ರನ್ ಗಳಿಸಿದ್ದರು. ಅದಾಗಿ ಎರಡು ವರ್ಷಗಳ ಬಳಿಕ ಅವರು ಮತ್ತೆ ಪ್ರಥಮ ದರ್ಜೆ ಕ್ರಿಕೆಟ್‌ಗೆ ವಾಪಸಾರಿ ಮಾಡಿದ್ದಾರೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ