ಕುಡಿದ ಮತ್ತಿನಲ್ಲಿ ಬಾರ್ ಮ್ಯಾನೇಜರ್ ಮೇಲೆ ಹಲ್ಲೆ
ಗಣೇಶೋತ್ಸವದ ಹಿನ್ನೆಲೆಯಲ್ಲಿ ಶನಿವಾರ ಮದ್ಯ ಮಾರಾಟ ನಿಷೇಧ ಇತ್ತು. ಭಾನುವಾರ ಬೆಳಗ್ಗೆಯಿಂದಲೇ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಯೋರ್ವ ಬಾರ್ ಮ್ಯಾನೇಜರ್ ಗೆ ಭೀಕರವಾಗಿ ಹಲ್ಲೆ ಮಾಡಿದ ಪರಿಣಾಮ ಬಾರ್ ಮಾಲೀಕ ಗಂಭೀರವಾಗಿ ಗಾಯಗೊಂಡ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ ಘಟನೆ ನಡೆದಿದೆ.
ಕುಡಿದ ಮತ್ತಿನಲ್ಲಿದ್ದ ಕುಡುಕ ಸುನೀಲ್ ಕರಿಕಟ್ಟಿ ಎಂಬ ಆರೋಪಿ ಹೀರಾಮನೆ ಡಿ ಜೋರಾಪೂರೆ (52) ಮ್ಯಾನೇಜರ್ ಮೇಲೆ ಬಾಟಲಿಯಿಂದ ಹಲ್ಲೆ ಮಾಡಿದ್ದಾನೆ. ಸ್ಥಳಕ್ಕೆ ಕಾಕತಿ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಖಾಸಗಿ ಆಸ್ಪತ್ರೆಗೆ ಕಾಕತಿ ಸಿಪಿಐ ದೌಡಾಯಿಸುತ್ತಿದ್ದಾರೆ.