Breaking News

ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್.!

Spread the love

ಬೆಂಗಳೂರು : ಮಾಧ್ಯಮಗಳಿಗೆ ನಿರ್ಬಂಧ ಹೇರಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾದ ಮಾಹಿತಿಗಳನ್ನು ಮಾಧ್ಯಮಗಳು ಬಯಲು ಮಾಡುತ್ತಿರುವ ಹಿನ್ನೆಲೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

 

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಭಾಗಿಯಾಗಿರುವುದು ಧೃಡವಾಗಿದ್ದು, ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಮಾಹಿತಿ ಬಯಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಕೋರ್ಟ್ ಗೆ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿಯೆಂದು ಉಲ್ಲೇಖಿಸಲಾಗಿದೆ. ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 3991 ಪುಟಗಳ ಸುದೀರ್ಘವಾದ ವಿವರಗಳುಳ್ಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿಸಿ ಹಲ್ಲೆ ಮಾಡಿದ್ದು ನಟ ಎನ್ನುವುದು ಧೃಡವಾಗಿದೆ. ಕೊಲೆ ಕೇಸ್ ಮುಚ್ಚಿಹಾಕಲು ಹಣ ನೀಡಿದ್ದು ದರ್ಶನ್ ಅನ್ನೋದು ಚಾರ್ಜ್ಶೀಟ್ನಲ್ಲಿ ಉಲ್ಲೇಖ ಆಗಿದೆ. ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾಸ್ವಾಮಿ ಅವರ ರಕ್ತ ಇರುವುದು ಪತ್ತೆ ಆಗಿದೆ. ಈ ಮೂಲಕ ನಟ ದರ್ಶನ್ ಕೊಲೆಯಲ್ಲಿ ಭಾಗಿಯಾಗಿರುವುದು ಧೃಡವಾಗಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ