ಬೆಂಗಳೂರು : ಮುಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ರಿಟ್ ಅರ್ಜಿಯ ವಿಚಾರಣೆ ನಡೆದಿದ್ದು, ಇದೀಗ ಸೆಪ್ಟೆಂಬರ್ 12ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ನ್ಯಾ.ಎಂ. ನಾಗಪ್ರಸನ್ನ ಆದೇಶ ಹೊರಡಿಸಿದ್ದಾರೆ.
ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕೇಂದ್ರ ಸರ್ಕಾರದ 17 ಮಾರ್ಗಸೂಚಿ ಆಧರಿಸಿ ವಾದಿಸಿದರು.17 Aಅಡಿ ಪ್ರಾಜೆಕ್ಯೂಷನ್ ಗೆ ಪೊಲೀಸರು ಅನುಮತಿ ಕೇಳಬಹುದು. ಅದಕ್ಕೂ ಮೊದಲು ತನಿಖಾಧಿಕಾರಿ ಪ್ರಾಥಮಿಕ ತನಿಖೆ ನಡೆಸಬೇಕು. ಪ್ರಾಥಮಿಕ ತನಿಖೆಯ ವಿವರವನ್ನು ಸಕ್ಷಮ ಪ್ರಾಧಿಕಾರಕ್ಕೆ ನೀಡಬೇಕು ಎಂದು ಲಲಿತಾ ಕುಮಾರಿ ಪ್ರಕರಣವನ್ನು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು. ಈ ವೇಳೆ ಎಫ್ ಐ ಆರ್ ದಾಖಲಿಸುವ ಮೊದಲು ಪ್ರಾಥಮಿಕ ತನಿಖೆ ಅಗತ್ಯವಿದೆ, ಆದರೆ 17 ಎ ಅಡಿ ಅನುಮತಿಗೆ ಪ್ರಾಥಮಿಕ ತನಿಖೆ ಆಗಿರಬೇಕೆಂದಿಲ್ಲ. ವಿಚಾರಣೆ ತನಿಖೆಗೂ ಮುನ್ನ 17ಎ ಅನುಮತಿ ಬೇಕಲ್ಲವೇ? ಎಂದು ಅಡ್ವಕೇಟ್ ಜನರಲ್ ಗೆ ನ್ಯಾ. ಎಂ.ನಾಗಪ್ರಸನ್ನ ಪ್ರಶ್ನಿಸಿದ್ದಾರೆ.
Laxmi News 24×7