Breaking News

ಬೆಳಗಾವಿ ಜಿಲ್ಲೆಗೆ ಮುಖ್ಯಮಂತ್ರಿ ಸ್ಥಾನ ಒಲಿದು ಬಂದರೆ ಸ್ವಾಗತ: ದುರ್ಯೋಧನ ಐಹೊಳೆ

Spread the love

ಚಿಕ್ಕೋಡಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದೆ. ಆದರೆ ಮುಖ್ಯಮಂತ್ರಿ ಸ್ಥಾನ ಬೆಳಗಾವಿ ಜಿಲ್ಲೆಗೆ ಒಲಿದು ಬಂದರೆ ಸಂತೋಷವಾಗುತ್ತದೆ ಮತ್ತು ನಾನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ ಎಂದು ರಾಯಬಾಗ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಹೇಳಿದರು.

 

ಈ ಕುರಿತು ಚಿಕ್ಕೋಡಿ ತಾಲೂಕಿನ ಕರಗಾಂವ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಅವರು ಉತ್ತರಿಸಿದರು.

ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ವೇಳೆ ಬದಲಾವಣೆ ಆದರೆ ನಮ್ಮ ಸ್ವಂತ ಜಿಲ್ಲೆ ಬೆಳಗಾವಿ ಹೀಗಾಗಿ ಬೆಳಗಾವಿಗೆ ಮುಖ್ಯಮಂತ್ರಿ ಒಲಿದು ಬಂದರೆ ಸ್ವಾಗತಿಸುತ್ತೇನೆ. ಇಲ್ಲಿಯವರಿಗೆ ಬೆಳಗಾವಿಗೆ ಮುಖ್ಯಮಂತ್ರಿ ಸ್ಥಾನ ಸಿಕ್ಕಿಲ್ಲ. ಮುಖ್ಯಮಂತ್ರಿ ಬದಲಾವಣೆ ಆದರೆ ಬೆಳಗಾವಿ ಜಿಲ್ಲೆಯವರೆ ಆದ ಸಚಿವ ಸತೀಶ ಜಾರಕಿಹೊಳಿ ಪರ ಐಹೊಳೆ ಪರೋಕ್ಷ ಬೆಂಬಲ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ