ರೈಲಿನಲ್ಲಿ ಖಾಸಗಿ ಅಂಗ ತೋರಿಸಿದ ವ್ಯಕ್ತಿಗೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ
Laxminews 24x7
ಸೆಪ್ಟೆಂಬರ್ 10, 2024
ರಾಜಕೀಯ, ರಾಜ್ಯ, ರಾಷ್ಟ್ರೀಯ
51 Views
ಎಷ್ಟೇ ಕಾನೂಕು ಕ್ರಮಗಳನ್ನು ಜಾರಿಗೆ ತಂದ್ರೂ ಕಾಮುಕ ಅಟ್ಟಹಾಸ ಮಾತ್ರ ನಿಲ್ಲುತ್ತಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ಮಹಿಳೆಯರಿಗೆ ಕಿರುಕುಳವನ್ನು ನೀಡುತ್ತಲೇ ಇರುತ್ತಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಕೂಡಾ ಚಲಿಸುತ್ತಿರುವ ರೈಲಿನಲ್ಲಿ ಮಹಿಳಾ ಪ್ರಯಾಣಿಕರಿಗೆ ತನ್ನ ಖಾಸಗಿ ಅಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದು, ದಿಟ್ಟ ಮಹಿಳೆಯೊಬ್ಬರು ಆತನಿಗೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿ ಎಲ್ರ ಮುಂದೆ ಆತನ ಗ್ರಹಚಾರ ಬಿಡಿಸಿದ್ದಾಳೆ.
ಈ ಕುರಿತ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.ಇತ್ತೀಚಿಗಂತೂ ಮಹಿಳೆಯರು ಹೊರಗಡೆ ಓಡಾಡುವುದೇ ಕಷ್ಟಸಾಧ್ಯವಾಗಿದೆ. ಹೌದು ಕೆಲ ವಿಕೃತ ಮನಸ್ಸಿನ ಪುರುಷರು ದಾರಿಯಲ್ಲಿಯೋ ಅಥವಾ ಜನಜಂಗಳಿಯ ಪ್ರದೇಶದಲ್ಲಿಯೋ ಹೆಣ್ಣು ಮಕ್ಕಳ ಮೈ ಮುಟ್ಟಿ ಅಥವಾ ಅವರ ಮುಂದೆ ಖಾಸಗಿ ಅಂಗ ಪ್ರದರ್ಶಿಸಿ ದುರ್ವರ್ತನೆಯನ್ನು ತೋರುತ್ತಿರುತ್ತಾರೆ. ಆದರೆ ಹೆಚ್ಚಿನವರು ಭಯದಿಂದ ಈ ಬಗ್ಗೆ ಧ್ವನಿ ಎತ್ತುವುದಿಲ್ಲ. ಇಂತಹ ಸಾಕಷ್ಟು ಘಟನೆಗಳು ಈ ಹಿಂದೆಯೂ ನಡೆದಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿ ಮಹಿಳಾ ಪ್ರಯಾಣಿಕರಿಗೆ ತನ್ನ ಖಾಸಗಿ ಅಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ದಿಟ್ಟ ಮಹಿಳೆಯೊಬ್ಬರು ಆತನಿಗೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿ ಎಲ್ರ ಮುಂದೆ ಆತನ ಗ್ರಹಚಾರ ಬಿಡಿಸಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಮೊಹಮ್ಮದ್ ತುಫೈಲ್ ಎಂಬಾತ ರೈಲಿನಲ್ಲಿ ಕುಳಿತು ಮಹಿಳಾ ಪ್ರಯಾಣಿಕರ ಮುಂದೆ ತನ್ನ ಖಾಸಗಿ ಅಂಗವನ್ನು ಪ್ರದರ್ಶಿಸಿದ್ದಾನೆ. ಇದನ್ನು ಕಂಡ ದಿಟ್ಟ ಮಹಿಳೆಯೊಬ್ಬರು ಬಾರೋ ಈಗ ಎಲ್ರ ಮುಂದೆ ತೋರಿಸೋ ಬಾ ಎಂದು ಹೇಳಿ ಆ ಕಾಮುಕನಿಗೆ ಎಲ್ಲರ ಮುಂದೆ ಹಿಗ್ಗಾಮುಗ್ಗಾ ಥಳಿಸಿ ಚಪ್ಪಲಿ ಸೇವೆ ಮಾಡಿದ್ದಾರೆ. ಈ ಕುರಿತ ಪೋಸ್ಟ್ ಒಂದನ್ನು RealBabanaras ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ:
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ರೈಲಿನಲ್ಲಿ ಮಹಿಳೆಯರ ಮುಂದೆ ಖಾಸಗಿ ಅಂಗ ಪ್ರದರ್ಶಿಸಿದ ಮೊಹಮ್ಮದ್ ತುಫೈಲ್ ಎಂಬಾತನ ಕಪಾಳಕ್ಕೆ ಚಪ್ಪಲಿ ಏಟು ನೀಡಿ, ಈಗ ತೋರಿಸೋ ಬಾ ಎಂದು ಹೇಳುತ್ತಾ ಆತನಿಗೆ ಹಿಗ್ಗಾಮುಗ್ಗಾ ಥಳಿಸುವ ದೃಶ್ಯವನ್ನು ಕಾಣಬಹುದು.