Breaking News

ರಾಜ್ಯ ಸರ್ಕಾರದಿಂದ SC ಸಮುದಾಯಕ್ಕೆ ಭರ್ಜರಿ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ.!

Spread the love

ರಾಜ್ಯ ಸರ್ಕಾರದಿಂದ SC ಸಮುದಾಯಕ್ಕೆ ಭರ್ಜರಿ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ.!

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ. 2024-25ನೇ ಸಾಲಿನಲ್ಲಿ ಈ ಯೋಜನೆಗಳಿಗೆ ಅರ್ಜಿ ಅಹ್ವಾನಿಸಿದೆ.

ಅಕ್ಟೋಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, 2023-24ನೇ ಸಾಲಿನಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ

ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ. ಘಟಕ ವೆಚ್ಚ 1 ಲಕ್ಷ ರೂ. ಸಹಾಯಧನ 50,000 ರೂ. ಸಾಲ, 50,000 ರೂ. ಶೇ. 4 ರಷ್ಟು ಬಡ್ಡಿದರ

ಭೂ ಒಡೆತನ ಯೋಜನೆ

ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಈ ಕೆಳಕಂಡ ಘಟಕ ವೆಚ್ಚದಲ್ಲಿ ಕೃಷಿ ಜಮೀನು ಖರೀದಿಸಿ ಘಟಕ 25 ಲಕ್ಷ ರೂ. ಸಹಾಯಧ ಶೇ. 50 ರಷ್ಟು ಸಹಾಯಧನ

ಮೈಕ್ರೋ ಕ್ರೆಡಿಟ್ ಯೋಜನೆ

ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ನೀಡಲಾಗುವುದು. ಘಟಕ ವೆಚ್ಚ 2.50 ಲಕ್ಷ ರೂ. ಸಹಾಯಧನ 1.50 ಲಕ್ಷ ರೂ. ಸಾಲ 1 ಲಕ್ಷ ರೂ.

ಗಂಗಾ ಕಲ್ಯಾಣ ಯೋಜನೆ

1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣಮತ್ತು ಅತಿ ಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ, ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ