Breaking News

ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ

Spread the love

ಬೆಂಗಳೂರು: ಅತ್ಯಾಚಾರ ಪ್ರಕರಣ ಸಂಬಂಧ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.12ಕ್ಕೆ ಮುಂದೂಡಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಮತ್ತು ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ದಾಖಲಾಗಿರುವ ಮತ್ತೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ .ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

 

ಈ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಹೊಳೆನರಸೀಪುರದಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಆದರೆ, ಇದುವರೆಗೂ ನಮಗೆ ಅದರ ಪ್ರತಿಯನ್ನು ನೀಡಿಲ್ಲ. ಆರೋಪಪಟ್ಟಿ ಬದಿಗೆಸರಿಸಿ ನೋಡಿದರೆ ಅರ್ಜಿದಾರರ ಮೇಲಿನ ಎಲ್ಲ ಆರೋಪಗಳಿಗೂ ಜಾಮೀನು ನೀಡಬುದಾಗಿದೆ ಎಂದರು.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ