ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಎಷ್ಟು ಕಿರಿಕಿರಿ ನೀಡುತ್ತಿದೆಯೋ? ಅದೇ ಪ್ರಮಾಣದಲ್ಲಿ ತಲೆಬಿಸಿ ಕೊಡುವ ವಿಚಾರ ಅಂದ್ರೆ ರಸ್ತೆ ಗುಂಡಿಗಳು. ಮಳೆಬಂದರೆ ಗುಂಡಿ ಕಾಣದೆ ವಾಹನ ಸಮೇತ ಬೀಳುವ ಘಟನೆಗಳು, ಅಪಘಾತಗಳು ಸಾಮಾನ್ಯ. ಹೀಗಾಗಿ ರಸ್ತೆಗಿಳಿದವರೆಲ್ಲ ಗುಂಡಿಗಳಿಗೆ ಹಿಡಿಶಾಪ ಹಾಕುತ್ತಲೇ ಸಂಚರಿಸುತ್ತಿದ್ದರು.
ಈ ವಿಚಾರ ರಾಜ್ಯ ಸರ್ಕಾರಕ್ಕೂ ದೊಡ್ಡ ತಲೆನೋವಾದ ಕಾರಣ ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮುಕ್ತಿ ನೀಡಬೇಕು ಎಂದು ಖುದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು.
ಇನ್ನು 15 ದಿನಗಳಲ್ಲಿ ಬೆಂಗಳೂರಿನ ರಸ್ತೆಗಳಲ್ಲಿ ಯಾವುದೇ ಗುಂಡಿಗಳು ಕಣ್ಣಿಗೆ ಕಾಣಿಸಬಾರದು. ಎರಡು ವಾರಗಳ ನಂತರ ನಾನೇ ಖುದ್ದಾಗಿ ಇಡೀ ಬೆಂಗಳೂರು ನಗರವನ್ನು ಸುತ್ತಾಡಲಿದ್ದೇನೆ. ಆಗ ಪ್ರತಿ ರಸ್ತೆಯನ್ನು ಕೂಡ ಪರಿಶೀಲಿಸುತ್ತೇನೆ. ಅಷ್ಟರಲ್ಲಿ ಗುಂಡಿಗಳು ಮಾಯವಾಗಿರಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಖಡಕ್ ಸೂಚನೆ ನೀಡಿದ್ದರು.