Breaking News

ದೇವಸ್ಥಾನಗಳಲ್ಲಿ ಕಳವು ಮಾಡುತ್ತಿದ್ದ ಜೈಲು ವಾರ್ಡನ್ ಸೇರಿ ಮೂವರು ಅರೆಸ್ಟ್

Spread the love

ದಗ: ದೇವಾಲಯಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಅಮಾನತುಗೊಂಡ ಜೈಲು ವಾರ್ಡನ್ ಸೇರಿದಂತೆ ಮೂವರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

ಅಮಾನತಾಗಿರುವ ಬಂಧಿಖಾಕಾನೆ ಇಲಾಖೆ ನೌಕರ ಶ್ರೀಕಾಂತ ಗುಡದೂರ, ಆತನ ಸಹಚರರಾದ ಪ್ರಸಾದ ಸಿಳ್ಳಿಕೇತರ, ಗುರುಪ್ರಸಾದ ಸಿಳ್ಳಿಕೇತರ ಬಂಧಿತ ಆರೋಪಿಗಳಾಗಿದ್ದಾರೆ.

ಇವರು ಗದಗ, ಹಾವೇರಿ, ವಿಜಯನಗರ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಯ ಹಲವು ದೇವಾಲಯಗಳಲ್ಲಿ ಕಳವು ಮಾಡಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ವಿಜಯನಗರ ಜಿಲ್ಲೆಯ ಕೊಟ್ಟೂರು, ಹರಪನಹಳ್ಳಿ, ಶಿವಮೊಗ್ಗ ಜಿಲ್ಲೆಯ ಆನವಟ್ಟಿ, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ನಡೆದ ಸರಗಳ್ಳತನ ಪ್ರಕರಣಗಳಲ್ಲಿಯೂ ಈ ತಂಡ ಭಾಗಿಯಾಗಿರುವುದು ವಿಚಾರಣೆ ಸಂದರ್ಭದಲ್ಲಿ ಗೊತ್ತಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.


Spread the love

About Laxminews 24x7

Check Also

ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿ ಸೆರೆ

Spread the loveಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲೊನಿಯ ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ