ಬೆಂಗಳೂರು : ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದ ಹಗರಣಗಳ ಕುರಿತು ತನಿಖೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಸಮಿತಿ ರಚಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮ ವಹಿಸಲು ಈ ಕೆಳಕಂಡಂತೆ ಮಾನ್ಯ ಸಚಿವರುಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ:
ಸಚಿವರುಗಳಾದ ಡಾ.ಜಿ. ಪರಮೇಶ್ವರ, ಹೆಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತು ಸಂತೋಷ್ ಲಾಡ್ ಅವರನ್ನೊಳಗೊಂಡ ಸಮಿತಿಯನ್ನು ರಚಿಸಿ, ಆದೇಶಿಸಲಾಗಿದೆ.
Laxmi News 24×7