ಬೆಳಗಾವಿ: ‘ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ. ಈಗ ಸಿ.ಎಂ ಸ್ಥಾನಕ್ಕೆ ರೇಸ್‌ನಲ್ಲಿ ಯಾರೂ ಇಲ್ಲವೇ ಇಲ್ಲ’ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.
‘ದೀಪಾವಳಿ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ’ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಇಲ್ಲಿ ಬುಧವಾರ ಸುದ್ದಿಗಾರರಿಗೆ ಹೀಗೆ ಪ್ರತಿಕ್ರಿಯಿಸಿದ ಅವರು, ‘ಸ್ಥಿರವಾಗಿರುವ ನಮ್ಮ ಸರ್ಕಾರವನ್ನು ಸಹಿಸಿಕೊಳ್ಳಲು ಬಿಜೆಪಿಯವರಿಗೆ ಆಗುತ್ತಿಲ್ಲ.
ಹಾಗಾಗಿ ಸರ್ಕಾರ ಬೀಳಿಸಲು, ಒಡೆಯಲು ಮತ್ತು ಆಪರೇಷನ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಬದಲಿಗೆ ಕಾಂಗ್ರೆಸ್ ಸರ್ಕಾರ ಬೀಳಿಸಲು ಯತ್ನಿಸುವುದೇ ಅವರ ಕೆಲಸವಾಗಿದೆ’ ಎಂದು ಟೀಕಿಸಿದರು.