Breaking News

ಚಂದ್ರಶೇಖರ ಗುರೂಜಿ ಸಂಬಂಧಿಕರಿಗೆ ಜೀವ ಬೆದರಿಕೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು : ಹು-ಧಾ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್

Spread the love

ಚಂದ್ರಶೇಖರ ಗುರೂಜಿ ಸಂಬಂಧಿಕರಿಗೆ ಜೀವ ಬೆದರಿಕೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು : ಹು-ಧಾ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್

ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪೊಲೀಸ್‌ ಕಮಿಷನರೇಟ್ ವ್ಯಾಪ್ತಿಯಲ್ಲಿನ ಕೊಲೆ, ಅತ್ಯಾಚಾರ, ಪೋಕೋ ಇತ್ಯಾದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರರಿಗೆ ಹಾಗೂ ಕುಟುಂಬಸ್ಥರ ಆಪ್ತ ಸಮಾಲೋಚನೆಗಾಗಿ ನೊಂದವರ ಸಭೆ ನಡೆಸಿದ್ದು, ಇದರಲ್ಲಿ ಕೋರ್ಟ್ ಆವರಣದಲ್ಲಿಯೇ ಚಂದ್ರಶೇಖರ ಗುರೂಜಿ ಕೊಲೆಯ ಆರೋಪಿಗಳು ಜೀವ ಬೆದರಿಕೆ ಹಾಕಿರುವ ಬಗ್ಗೆ ಮಾಹಿತಿ ಬಂದಿದೆ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ ಎಂದರು.

ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳನ್ನು ಕೋರ್ಟ್ ಹಾಜರು ಪಡಿಸುವ ಜೊತೆಗೆ ಇಬ್ಬರು ಕೊಲೆ ಆರೋಪಿಗಳು ಮಾತ್ರವೇ ಈ ಜೀವ ಬೆದರಿಕೆ ಹಾಕಿದ್ದಾರೋ ಅಥವಾ ಬೇರೆ ಯಾರಾದರೂ ಈ ಪ್ರಕರಣದಲ್ಲಿ ಇದ್ದಾರೋ ಎಂಬುವುದರ ಬಗ್ಗೆ ಸೂಕ್ತ ತನಿಖೆ ನಡೆಸಲಾಗುತ್ತದೆ ಎಂದು ಭರವಸೆ ನೀಡಿದರು.


Spread the love

About Laxminews 24x7

Check Also

ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿ ಸೆರೆ

Spread the loveಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲೊನಿಯ ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ