ಬೆಂಗಳೂರು: ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಇಂದು ಮುಕ್ತಾಯಗೊಂಡಿದ್ದು, ಅರ್ಜಿ ಕುರಿತು ಹೈಕೋರ್ಟ್ ಸದ್ಯ ತೀರ್ಪು ಕಾಯ್ದಿರಿಸಿದೆ.
ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಇಂದು ಈ ಅರ್ಜಿ ವಿಚಾರಣೆಯನ್ನು ನಡೆಸಿದ ಕೋರ್ಟ್, ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿತ್ತು. ರಾಜ್ಯಪಾಲರ ಹಾಗೂ ಮುಖ್ಯಮಂತ್ರಿಗಳ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಸುದೀರ್ಘ ವಿಚಾರಣೆಯ ಬಳಿಕ ಇದೀಗ ತೀರ್ಪನ್ನು ಕಾಯ್ದಿರಿಸಿದೆ.
ಸಿಎಂ ಪರ ವಾದ ಮಂಡಿಸಿದ ಪ್ರೋ. ರವಿವರ್ಮ ಕುಮಾರ್
ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದಮಂಡನೆ
ದೂರುದಾರ ಟಿ.ಜೆ.ಅಬ್ರಹಾಂ ಪರ ರಂಗನಾಥ್ ರೆಡ್ಡಿ ವಾದ