Breaking News

ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ

Spread the love

ವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆ ಇದೆ. ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಸಚಿವಾಲಯ ಕಾರ್ಯದರ್ಶಿ ಪಂಕಜ್ ಜೈನ್ ಈ ಬಗ್ಗೆ ಸುಳಿವು ನೀಡಿದ್ದಾರೆ.

ವಿಶ್ವದಾದ್ಯಂತ ಕಚ್ಚಾತೈಲದ ದರ ಸ್ವಲ್ಪ ಸಮಯದವರೆಗೆ ನಿರಂತರವಾಗಿ ಕಡಿಮೆಯಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ.

ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ

ಕಚ್ಚಾತೈಲ ದರ ದೀರ್ಘಕಾಲದವರೆಗೆ ಕಡಿಮೆಯಾದರೆ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರ ಕಡಿಮೆ ಮಾಡಲು ಪರಿಗಣಿಸಬಹುದು ಎಂದು ಹೇಳಿದ್ದಾರೆ.

ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ವಿಂಡ್ ಫಾಲ್ ತೆರಿಗೆ ಕೈಬಿಡಲು ಚಿಂತನೆ ನಡೆಸುತ್ತಿದ್ದು, ತೈಲ ಸಚಿವಾಲಯ, ಹಣಕಾಸು ಸಚಿವಾಲಯದೊಂದಿಗೆ ಚರ್ಚೆ ನಡೆದಿದೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಕಚ್ಚಾ ತೈಲದ ದರಗಳು ಮೂರು ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, ಇಂಧನ ಮಾರುಕಟ್ಟೆ ಕಂಪನಿಗಳ ಲಾಭದಾಯಕತೆ ಹೆಚ್ಚಿಸಿದೆ. ಮಹಾರಾಷ್ಟ್ರ ಮತ್ತು ಹರಿಯಾಣದಂತಹ ಪ್ರಮುಖ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಮೊದಲು ಇಂಧನ ದರ ಇಳಿಕೆಯಾಗಬಹುದು ಎನ್ನಲಾಗಿದೆ.


Spread the love

About Laxminews 24x7

Check Also

ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿ ಸೆರೆ

Spread the loveಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲೊನಿಯ ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ