ಹಾಸನ: ಎಸ್‌ಐಟಿ ರಾಜ್ಯ ಸರಕಾರದ ಹಿಡಿತದಲ್ಲಿದೆ. ವಾಲ್ಮೀಕಿ ನಿಗಮ ಹಗರಣದ ತನಿಖೆ ನಡೆಸಿದ ಎಸ್‌ಐಟಿ ಮಾಜಿ ಸಚಿವ ನಾಗೇಂದ್ರ ಹೆಸರನ್ನೇ ಕೈ ಬಿಟ್ಟು ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಆದರೆ ಇದೇ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ. ನಾಗೇಂದ್ರ ಮೊದಲ ಆರೋಪಿ ಎಂದು ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಮಾಜಿ ಸಚಿವ ಎಚ್.ಡಿ.
ರೇವಣ್ಣ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಸರಕಾರದ ಹಿಡಿತದಲ್ಲಿ ಎಸ್‌ಐಟಿ ಸಿಲುಕಿದೆ ಎಂಬುದು ಗೊತ್ತಾಗುವುದಿಲ್ಲವೇ ? ಈಗ ನನ್ನ ವಿರುದ್ಧವೂ ಎಸ್‌ಐಟಿ ತನಿಖೆ ನಡೆಸಿದೆ. ಸಮಯ ಬಂದಾಗ ಎಸ್‌ಐಟಿ ಬಗ್ಗೆ ಎಲ್ಲವನ್ನೂ ಹೇಳುವೆ ಎಂದರು.