ಬೆಂಗಳೂರು: 2024-25ನೇ ಸಾಲಿಗೆ ದ್ವಿತೀಯ ಪಿಯುಸಿ ತರಗತಿಗಳಿಗೆ ಬೋಧಿಸುವ ಎಲ್ಲ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಕಾಲೇಜು ಹಂತದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತಂತೆ ಸೂಚನೆಗಳನ್ನು ನೀಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.

2024-25 ನೇ ಸಾಲಿಗೆ ದ್ವಿತೀಯ ಪಿಯುಸಿ ತರಗತಿಗಳಿಗೆ ಬೋಧಿಸುವ ಎಲ್ಲ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಪದವಿಪೂರ್ವ ಪಠ್ಯಕ್ರಮ ಬೋಧಿಸುವ ಉಪನ್ಯಾಸಕರಿಂದ ತಯಾರಿಸಿ ಮಂಡಳಿಯ ಜಾಲತಾಣದಲ್ಲಿ ಲಭ್ಯಗೊಳಿಸಲಾಗಿದೆ.
ಮಾದರಿ ಪ್ರಶ್ನೆಪತ್ರಿಕೆಗಳನ್ವಯ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆಗಳಿಗೆ ಸಜ್ಜುಗೊಳಿಸಿ ಫಲಿತಾಂಶ ಉತ್ತಮಪಡಿಸಲು ಪ್ರಾಂಶುಪಾಲರು, ಉಪನ್ಯಾಸಕರು ಕಾಲೇಜು ಹಂತದಲ್ಲಿ ಕ್ರಮ ಕೈಗೊಳ್ಳಲು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
Laxmi News 24×7