Breaking News

ರಾಜ್ಯದ `SSLC’ ವಿದ್ಯಾರ್ಥಿಗಳೇ ಗಮನಿಸಿ : `ಸಂಕಲನಾತ್ಮಕ ಮೌಲ್ಯಮಾಪನ-1 ಪರೀಕ್ಷೆ’ ವೇಳಾಪಟ್ಟಿ ಪ್ರಕಟ

Spread the love

ಬೆಂಗಳೂರು : 2024 ನೇ ಸಾಲಿನ ಎಸ್ ಎಸ್ ಎಲ್ ಸಿ ಸಂಕಲನಾತ್ಮಕ ಮೌಲ್ಯಮಾಪನ-1 ಪರೀಕ್ಷೆಯನ್ನು ಸೆ.24 ರಿಂದ ಅ.1 ರವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ವೇಳಾಪಟ್ಟಿ ಪ್ರಕಟಿಸಿದೆ.

2024-25ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-ಅನ್ನು ನಡೆಸಲು ಮಂಡಲಿಯಿಂದ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ ನೀಡುವಂತೆ ಉಲ್ಲೇಖಿತ ಸುತ್ತೋಲೆಯಲ್ಲಿ ಸರ್ಕಾರದಿಂದ ಆದೇಶವಾಗಿರುತ್ತದೆ.

ಅದರಂತೆ ಎಲ್ಲಾ ವಿಷಯಗಳಿಗೆ ಮಂಡಲಿ ಹಂತದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಲಾಗಿದ್ದು, ಪ್ರಶ್ನೆಪತ್ರಿಕೆಗಳ ಸಾಫ್ಟ್ ಪ್ರತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ಗೆ ಲಭ್ಯಗೊಳಿಸಲಾಗುವುದು.

ಅದರಂತೆ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಸಂಕಲನಾತ್ಮಕ ಮೌಲ್ಯಮಾಪನ-1ನ್ನು ದಿನಾಂಕ: 24.09.2024 ರಿಂದ 01.10.2024 ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸದರಿ ಪರೀಕ್ಷೆಯನ್ನು ಆಯಾ ಶಾಲಾ ಹಂತದಲ್ಲಿ ವ್ಯವಸ್ಥಿತವಾಗಿ ನಡೆಸಲು ಸೂಕ್ತ ಕ್ರಮವಹಿಸಲು ತಿಳಿಸಿದೆ.

ಇಲ್ಲಿದೆ `ಸಂಕಲನಾತ್ಮಕ ಮೌಲ್ಯಮಾಪನ-1 ಪರೀಕ್ಷೆ’ ವೇಳಾಪಟ್ಟಿ

ಸೆ.24- ಪ್ರಥಮ ಭಾಷ (ಕನ್ನಡ, ಹಿಂದಿ, ಇಂಗ್ಲಿಷ್)

ಸೆ.25- ದ್ವಿತೀಯ ಭಾಷ (ಇಂಗ್ಲಿಷ್, ಹಿಂದಿ) ಜೊತೆಗೆ ಅದೇ ದಿನ ಮಧ್ಯಾಹ್ನ (ಹಿಂದಿ, ಕನ್ನಡ, ಇಂಗ್ಲಿಷ್)

ಸೆ. 26-ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್

ಸೆ.27- ಕೋರ್ ವಿಷಯಗಳಾದ ಗಣಿತ, ಸಮಾಜ ಶಾಸ್ತ್ರ, ವಿಜ್ಞಾನ

ಸೆ.28- ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ

ಸೆ.30- ಸಮಾಜ ವಿಜ್ಞಾನ,

ಅ.1- ಜೆಟಿಎಸ್ ವಿಷಯಗಳ ಪರೀಕ್ಷೆಗಳು ನಡೆಯಲಿವೆ.


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ