Breaking News

ವಕ್ಫ್‌ ತಿದ್ದುಪಡಿ ಕಾಯ್ದೆ ರದ್ದುಪಡಿಸಿ: ಎಸ್‌ಡಿಪಿಐ

Spread the love

ಬೆಳಗಾವಿ: ವಕ್ಫ್‌ ಮಂಡಳಿಯ ಹಕ್ಕು ಮತ್ತು ಸ್ವಾತಂತ್ರ್ಯ ಮೊಟಕುಗೊಳಿಸಲು ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ವಕ್ಫ್‌ ತಿದ್ದುಪಡಿ ಕಾಯ್ದೆ ರದ್ದುಪಡಿಸಬೇಕು ಎಂದು ಆಗ್ರಹಿಸಿ ಸೋಷಿಯಲ್‌ ಡೆಮಾಕ್ರೆಟಿಕ್‌ ಪಾರ್ಟಿ ಆಫ್‌ ಇಂಡಿಯಾ(ಎಸ್‌ಡಿಪಿಐ) ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ವಕ್ಫ್‌ ತಿದ್ದುಪಡಿ ಕಾಯ್ದೆ ರದ್ದುಪಡಿಸಿ: ಎಸ್‌ಡಿಪಿಐ

ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಕಾರರು, ‘ಮುಸ್ಲಿಮರಿಗೆ ಮಾರಕವಾಗಿರುವ ಈ ಕಾಯ್ದೆಯನ್ನು ನಾವು ಎಂದಿಗೂ ಒಪ್ಪುವುದಿಲ್ಲ. ಇದನ್ನು ರದ್ದುಪಡಿಸುವವರೆಗೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ’ ಎಂದರು. ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತ ಮೂಲಕ ಕೇಂದ್ರಕ್ಕೆ ಮನವಿ ಸಲ್ಲಿಸಿದರು.

‘ವಕ್ಫ್‌ ಮಂಡಳಿಯಲ್ಲಿ ಬದಲಾವಣೆ ತರಲು ಎನ್‌ಡಿಎ ನೇತೃತ್ವದ ಸರ್ಕಾರ ಕರಾಳವಾದ ಕಾಯ್ದೆ ಜಾರಿಗೊಳಿಸುತ್ತಿದೆ. ಈ ಹಿಂದೆ ವಕ್ಫ್‌ ಮಂಡಳಿ ಆಸ್ತಿ ಕಬಳಿಸುವವರ ವಿರುದ್ಧ ಕ್ರಮ ಕೈಗೊಳ್ಳುವ ಕಾನೂನು ಇತ್ತು. ಈಗ ಅದನ್ನು ರದ್ದುಪಡಿಸಲಾಗುತ್ತಿದೆ. ಯಾರಾದರೂ ವಕ್ಫ್‌ ಮಂಡಳಿ ಆಸ್ತಿಗೆ ಕನ್ನ ಹಾಕಲು ಯತ್ನಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ಕೊಟ್ಟರು.‌

ಮುಖಂಡರಾದ ಮಕ್ಸೂದ್‌ ಮಕಾನದಾರ, ಇಮ್ರಾನ್‌ ಅತ್ತಾರ್‌, ಮಜೀದ್‌ ಶೇಖ್‌, ಇಸ್ಮಾಯಿಲ್‌ ವಣ್ಣೂರ, ಮೌಝಮ್‌ಜಾ ಮುಲ್ಲಾನಿ ಪ್ರತಿಭಟನೆ ನೇತೃತ್ವ ವಹಿಸಿದ್ದರು


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ