ಹುಕ್ಕೇರಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಲು ಉದ್ಧೇಶಿಸಿರುವ ‘ವಕ್ಫ್ ತಿದ್ದುಪಡಿ ಮಸೂದೆ 2024’ ಅನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ಮುಸ್ಲಿಮರು ಸೇರಿ ಎಸ್‌ಡಿಪಿಐ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.
ಪ್ರಮುಖ ಬೀದಿಗಳಲ್ಲಿ ನೂರಾರು ಸದಸ್ಯರು ಮೆರವಣಿಗೆ ಮೂಲಕ ಪ್ರತಿಭಟಿಸುತ್ತ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಪಟ್ಟಣದ ಕೋರ್ಟ್ ಸರ್ಕಲ್ ಬಳಿ ಬಂದು ಕೆಲ ಸಮಯ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದರು. ಟ್ರಾಫಿಕ್ ಜಾಂ ಆಗದಂತೆ ಪೊಲೀಸ್ ಇನ್‌ಸ್ಪೆಕ್ಟರ್ ಮಹಾಂತೇಶ ಬಸ್ಸಾಪುರ ಮತ್ತು ಪಿಎಸ್‌ಐ ಅಭಿಜೀತ ಅಕ್ಕತಂಗೇರಹಾಳ ಪ್ರತಿಭಟನಾಕಾರರ ಮನವೊಲಿಸಿದರು.
ಹುಕ್ಕೇರಿಯಲ್ಲಿ ಶುಕ್ರವಾರ ಎಸ್.ಡಿ.ಪಿ.ಐ ಸಂಘಟನೆ ಸದಸ್ಯರು ಮತ್ತು ಸ್ಥಳೀಯ ಮುಸ್ಲಿಮರು ವಕ್ಫ್ ತಿದ್ದುಪಡಿ ಮಸೂದೆ ತಿರಸ್ಕರಿಸುವಂತೆ ಆಗ್ರಹಿಸಿ ಪ್ರತಿಭಟಿಸಿದರು.ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
Laxmi News 24×7