Breaking News

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: 145 ಕಿ.ಮೀ ಮಾನವ ಸರಪಳಿ

Spread the love

ಬೆಳಗಾವಿ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯಲ್ಲಿ ಭಾನುವಾರ 145 ಕಿ.ಮೀ ಮಾನವ ಸರಪಳಿ ನಿರ್ಮಿಸಲಾಗುತ್ತಿದೆ.

ರಾಮದುರ್ಗ ತಾಲ್ಲೂಕಿನ ಸಾಲಹಳ್ಳಿಯಿಂದ ಯರಗಟ್ಟಿ, ಹಲಕಿ ಕ್ರಾಸ್, ನೇಸರಗಿ, ಸಾಂಬ್ರಾ, ಬೆಳಗಾವಿ, ಹಿರೇಬಾಗೇವಾಡಿ, ಎಂ‌.ಕೆ.ಹುಬ್ಬಳ್ಳಿ ಮಾರ್ಗವಾಗಿ ಚನ್ನಮ್ಮನ ಕಿತ್ತೂರಿನವರೆಗೆ ಮಾನವ ಸರಪಳಿ ರಚಿಸಲಾಗುತ್ತಿದೆ.

 

 ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಿದ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಚಾಲನೆ ನೀಡಿದರು. ಜಾನಪದ ಕಲಾತಂಡಗಳ ಪ್ರದರ್ಶನ ಮನಸೆಳೆಯಿತು.

 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಶಾಸಕ ವಿಠ್ಠಲ ಹಲಗೇಕರ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಇತರರಿದ್ದರು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ