ಚಿಕ್ಕೋಡಿ: ಶಾಲಾ ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರ ತೋರಿಸುವುದು ಮತ್ತು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನೋರ್ವನನ್ನು ಚಿಕ್ಕೋಡಿ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಚಿಕ್ಕೋಡಿ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡುವ ಕುರಿತು ವಿದ್ಯಾರ್ಥಿನಿಯರು ಅಳುತ್ತಾ ಮನೆಗೆ ಹೋದಾಗ ಬಾಲಕಿಗೆ ಪೋಷಕರು ಪ್ರಶ್ನಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಾಲಕಿಯ ತಂದೆ ಇತರ ಪೋಷಕರಿಗೆ ಮಾಹಿತಿ ನೀಡಿ ವಿಚಾರಿಸಿದಾಗ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಈ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಮಾಹಿತಿ ಲಭ್ಯವಾಗಿದ್ದು, ಪೋಷಕರು ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದ ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.