ಡಿಸಿಎಂ ‘ಡಿ.ಕೆ ಶಿವಕುಮಾರ್’ಗೆ ಬಿಗ್ ಶಾಕ್: ಆದಾಯ ಮೀರಿ ಆಸ್ತಿ ಗಳಿಕೆ ಕೇಸಲ್ಲಿ ‘ಸುಪ್ರೀಂ ಕೋರ್ಟ್’ನಿಂದ ನೋಟಿಸ್

Spread the love

ವದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್, ಕರ್ನಾಟಕ ಸರ್ಕಾರ ಹಾಗೂ ಲೋಕಾಯುಕ್ತರಿಗೆ ಸುಪ್ರೀಂ ಕೋರ್ಟ್ ಮಂಗಳವಾರದಂದು ನೋಟಿಸ್ ಜಾರಿಗೊಳಿಸಿದೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ಶಾಕ್ ನೀಡಲಾಗಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನಾಯಾಯಮೂರ್ತಿ ಸೂರ್ಯಕಾಂತ್ ಹಾಗೂ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠವು, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಇನ್ನೂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿದೆ. ಆರಂಭದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಪೀಠವು ಇದು ರಾಜ್ಯ, ಸಿಬಿಐ ನಡುವಿನ ವಿಯಷವಾಗಿರುವುದರಿಂದ ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಹೇಗೆ ಅವಕಾಶ ಇದೆ ಎಂಬುದಾಗಿ ಪ್ರಶ್ನಿಸಿತ್ತು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ