Breaking News

247 PDO ಹುದ್ದೆ’ಗಳ ನೇಮಕಕ್ಕೆ ಮತ್ತೆ ಅರ್ಜಿ ಆಹ್ವಾನ | PDO Recruitment

Spread the love

ಬೆಂಗಳೂರು: ಸರ್ಕಾರದ ಎಲ್ಲಾ ಪ್ರವರ್ಗಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷ ಸಡಿಲಿಸಿರುವ ಹಿನ್ನಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ 247 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಭರ್ತಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಕೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ ನೀಡಿ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕೆಪಿಎಸ್ಸಿ ಕಲ್ಪಿಸಿದೆ.

ಈ ಮೂಲಕ ತಿದ್ದುಪಡಿ ಅಧಿಸೂಚನೆ ಹೊರಡಿಸಲಾಗಿದೆ.

ಅಂದಹಾಗೆ 247 ಪಿಡಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್.3 ಕೊನೆಯ ದಿನವಾಗಿದೆ. ಅರ್ಜಿಯನ್ನು
www.kapsc.kar.nic.in
ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಪಿಎಸ್‌ಐ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ( PSI Recruitment Exam )

ದಿನಾಂಕ 03-10-2024ರಂದು ಬೆಳಿಗ್ಗೆ 10.30ರಿಂದ 12 ಗಂಟೆಯವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 12.30ರಿಂದ 2 ಗಂಟೆಯವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ.
ಇಲ್ಲಿದೆ ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿ

ದಿನಾಂಕ 29-09-2024ರ ಭಾನುವಾರದಂದು ಬೆಳಿಗ್ಗೆ 10.30ರಿಂದ 12.30ರವರೆಗೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಹಾಜರಾಗಿ ಅರ್ಹತೆಗಳಿಸಿದ್ದಲ್ಲಿ ಮಾತ್ರ ಮುಖ್ಯ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ.
ದಿನಾಂಕ 26-10-2024ರ ಶನಿವಾರದಂದು ಜಿಟಿಟಿಸಿಯ ವಿವಿಧ ಹುದ್ದೆಗಳಿಗೆ ಮಧ್ಯಾಹ್ನ 2.30ರಿಂದ 4.30ರವರೆಗೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದೆ. ವಯೋಮಿತಿ ಸಡಿಲಿಕೆಯಿಂದ ಹೊಸದಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರವೇ ಈ ಪರೀಕ್ಷೆ ನಡೆಸಲಾಗುತ್ತಿದೆ.
ಹೀಗಿದೆ ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆ ವೇಳಾಪಟ್ಟಿ

ದಿನಾಂಕ 27-10-2024ರಂದು ಬೆಳಿಗ್ಗೆ 10.30ರಿಂದ 12.30ರವರೆಗೆ ಪತ್ರಿಕೆ-1, ಮಧ್ಯಾಹ್ನ 2.30ರಿಂದ 4.30ರವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ.
ಇಲ್ಲಿದೆ ಕೆಸೆಟ್ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ( KSET Exam 2024)

ದಿನಾಂಕ 24-11-2024ರಂದು ಬೆಳಿಗ್ಗೆ 10 ರಿಂದ 1 ಗಟೆಯವರೆಗೆ ಪತ್ರಿಕೆ 1 ಮತ್ತು 2ರ ಪರೀಕ್ಷೆ ನಡೆಯಲಿದೆ.
ಹೀಗಿದೆ ರಾಯಚೂರು ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷಾ ವೇಳಾಪಟ್ಟಿ

ದಿನಾಂಕ 24-11-2024ರಂದು ಬೆಳಿಗ್ಗೆ 11 ರಿಂದ 1 ಗಂಟೆಯವರೆಗೆ ಪತ್ರಿಕೆ-2 ಹಾಗೂ 3 ಗಂಟೆಯಿಂದ 4 ಗಂಟೆಯವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಯಲಿದೆ.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ